ನವದೆಹಲಿ,ಮಾರ್ಚ್,26,2025 (www.justkannada.in): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಇಂದು ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಅಭಿವೃದ್ಧಿ ಕುರಿತಂತೆ ವಿಸ್ತೃತ ಚರ್ಚೆ ನಡೆಸಿದರು.
ನಂತರ ಮಾತನಾಡಿದ ಸಂಸದ ಸುಧಾಕರ್, ಪ್ರಧಾನಿ ಮೋದಿ ಅವರಿಗೆ ಈ ಭಾಗಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಯ ತುರ್ತು ಅಗತ್ಯವಿದೆ ಎನ್ನುವುದನ್ನ ಮನವರಿಕೆ ಮಾಡಿಕೊಟ್ಟಿದ್ದೇನೆ, ಜನಸಾಮಾನ್ಯರ ಆಶೋತ್ತರಗಳಿಗೆ ಪೂರಕವಾಗಿ ಕೆಲಸ ಮಾಡಲು ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದನು ಎಂದರು.
ಪ್ರಧಾನಿ ಮೋದಿ ಅವರು ಈ ಹಿಂದೆ ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ವೇಳೆ ಮಳೆ ನೀರಿನ ಸಂರಕ್ಷಣೆ ಹಾಗೂ ಅಂತರ್ಜಲ ಮರುಪೂರಣ ಮಾಡುವ ನಿಟ್ಟಿನಲ್ಲಿ ಜನಸಾಮಾನ್ಯರ ಪಾಲ್ಗೊಳ್ಳುವಿಕೆಯೊಂದಿಗೆ ಕೈಗೊಂಡ ಯೋಜನೆಗಳು ಹಾಗೂ ಉಪಕ್ರಮಗಳು ಬಗ್ಗೆ ವಿವರಿಸಿ, ಮಳೆಯಾಶ್ರಿತ ಪ್ರದೇಶವಾಗಿರುವ ನಮ್ಮ ಕರ್ನಾಟಕದ ಬಯಲುಸೀಮೆ ಜಿಲ್ಲಗಳಲ್ಲಿಯೂ ಸಹ ಇದೇ ಮಾದರಿಯನ್ನು ಅನುಸರಿಸುವಂತೆ ಸಲಹೆ ನೀಡಿದರು.
Key words: MP, Dr. K. Sudhakar, Meet, PM, Modi