ಬೆಂಗಳೂರು,ಏಪ್ರಿಲ್,12,2025 (www.justkannada.in): ಕನ್ನಡ ಚಿತ್ರರಂಗದಲ್ಲಿ ಸುಮಾರು 5 ದಶಕಗಳ ಕಾಲ ಮಿಂಚಿ ಮರೆಯಾದ ಕನ್ನಡಿಗರ ಕಣ್ಮಣಿ ನಟ ಸಾರ್ವಭೌಮ ಡಾ.ರಾಜ್ಕುಮಾರ್ ಅವರ 19ನೇ ಪುಣ್ಯಸ್ಮರಣೆ ದಿನವಾಗಿದ್ದು. ಕುಟುಂಬಸ್ಥರು ಸಮಾಧಿಗೆ ಪೂಜೆ ಸಲ್ಲಿಕೆ ಮಾಡಿದರು.
ನಟ ಡಾ.ರಾಜ್ ಕುಮಾರ್ ಅವರು 2006ರ ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಕೊನೆಯುಸಿರೆಳೆದರು. ಅಂದು ಕರುನಾಡಿಗೆ ಬರಸಿಡಿಲು ಬಡಿದಂತಾಗಿತ್ತು. ಆದ್ರೆ ಅವರ ನೆನಪು ಪ್ರತೀ ಕನ್ನಡಿಗರೆದೆಯಲ್ಲಿ ಅಚ್ಚಳಿಯದೇ ಉಳಿದಿದೆ. ಇಂದಿಗೂ ಕನ್ನಡ ಚಿತ್ರರಂಗದ ಕೀರ್ತಿಯಾಗಿ ಅವರ ನಟಸಾರ್ವಭೌಮನ ಸ್ಮರಣೆಯಾಗುತ್ತಿದೆ.
ನಟ ರಾಜ್ ಕುಮಾರ್ ಅವರ ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಕೆ ಮಾಡಿದ್ದಾರೆ. ಮೊದಲು ನಟ ದಿ. ಪುನೀತ್ ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಅಣ್ಣವ್ರಿಗೆ ಪೂಜೆ ಸಲ್ಲಿಕೆ ಮಾಡಲಾಗಿದೆ.
ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಭದ್ರವಾಗಿ ವಿರಾಜಮಾನವಾಗಿರುವ ರಾಜ್ ಅವರ ಅಭಿಮಾನಿಗಳು ಹಲವು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಅವರ ಪುಣ್ಯ ಸ್ಮರಣೆ ಮಾಡಲಿದ್ದಾರೆ.
Key words: Today, actor Dr. Raj Kumar, Commemoration, family