ಮೈಸೂರು,ಜನವರಿ,18,2025 (www.justkannada.in): ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ. ಶ್ಯಾಮ್ ಭಟ್ ಹಾಗೂ ಸದಸ್ಯರಾದ ಎಸ್.ಕೆ.ವೆಂಟಿಗೋಡಿ ಅವರು ಜನವರಿ 20 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜನವರಿ 20 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿಗೆ ಆಗಮಿಸುವ ಅಧ್ಯಕ್ಷರು ಮೈಸೂರು ಕಾರಾಗೃಹಕ್ಕೆ ಭೇಟಿ ನೀಡಿ ಜಿಲ್ಲಾ ಕಾರಾಗೃಹದ ಅಧೀಕ್ಷರೊಂದಿಗೆ ಚರ್ಚೆ ನಡೆಸುವರು.
ನಂತರ ಮಧ್ಯಾಹ್ನ 3 ಗಂಟೆಗೆ ಕೆ.ಆರ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸುವರು ಎಂದು ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ಅರುಣ್ ಪೂಜಾರ ಅವರು ತಿಳಿಸಿದ್ದಾರೆ.
Key words: State Human Rights Commission Chairman, Dr. T. Shyam Bhat, visit ,Mysore, Jan. 20