ಮೈಸೂರು,ಫೆಬ್ರವರಿ,19,2025 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತಿಂದ್ರ ಸಿದ್ದರಾಮಯ್ಯ, ಯಾರೂ ಕೂಡ ಸಿಎಂ ಬದಲಾವಣೆ ವಿಚಾರ ಮಾತನಾಡುತ್ತಿಲ್ಲ. ಆದರೆ ಮಾಧ್ಯಮಗಳಲ್ಲಿ ಮಾತ್ರ ಸಿಎಂ ಬದಲಾವಣೆ ವಿಚಾರ ಬರುತ್ತಿದೆ . ಇಂತಹ ವಿಚಾರಗಳಿಗೆ ವಿರಾಮ ಹಾಕಬೇಕು ಎಂದರು.
ಸಿಎಂ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲ ಕೊಡುವುದಾಗಿ ಹೈಕಮಾಂಡ್ ನಾಯಕರು ಹೇಳಿದ್ದಾರೆ. ಸಿಎಂ ಬದಲಾಬಣೆ ಬಗ್ಗೆ ಯಾರು ಮಾತನಾಡುತ್ತಿಲ್ಲ. ರಾಜಕೀಯದ ಯಾವ ವಿಷಯವನ್ನ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ. ಪಕ್ಷದ ಆಂತರಿಕ ವಿಚಾರವನ್ನ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
Key words: no question, CM change, state, Dr. Yatindra Siddaramaiah