ಬೆಂಗಳೂರು,ನವೆಂಬರ್,24,2020(www.justkannada.in): ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳು ಮತ್ತು ಏತ ನೀರಾವರಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕಾಗಿ ಬಾಕಿ ಇರುವ ಅರಣ್ಯ ಇಲಾಖೆಯ ಅನುಮೋದನೆಗಳನ್ನು ಕೂಡಲೇ ಪಡೆದುಕೊಳ್ಳಲು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಸೂಚನೆ ನೀಡಿದ್ದಾರೆ.
ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ತಿರುವಳಿಗಳನ್ನು ಪಡೆಯುವ ಕುರಿತು ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಬಾಕಿ ಇರುವ ಪ್ರಸ್ತಾವನೆಗಳಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಉನ್ನತ ಮಟ್ಟದ ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಧದೇವಿ, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನೀಲ್ ಕುಮಾರ್, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಭಾಗವಹಿಸಿದ್ದರು.
Key words: Drinking Water Project-Water Resources Minister -Ramesh Jarakiholi- instructed – Forest Department – approval -immediately.