ತುಮಕೂರು,ಡಿಸೆಂಬರ್ 24,2024 (www.justkannada.in): ಸೋಡಿಯಂ ಮೆಟಲ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಆರೋಪಿ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಬಿಡುಗಡೆಯಾಗಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಡ್ರೋನ್ ಪ್ರತಾಪ್ ಸ್ಪೋಟ ಮಾಡಿದ್ದರು. ಈ ಸಂಬಂಧ ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಡ್ರೋನ್ ಪ್ರತಾಪ್ ರನ್ನ ಬಂಧಿಸಿದ್ದರು. ನಂತರ ಮಧುಗಿರಿ ಜೆಎಮ್ ಎಫ್ ಸಿ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು.
ಈ ನಡುವೆ ನಿನ್ನೆ ಡ್ರೋನ್ ಪ್ರತಾಪ್ ಗೆ ಮಧುಗಿರಿ 4 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇದೀಗ ಡ್ರೋನ್ ಪ್ರತಾಪ್ ತುಮಕೂರು ಉಪಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.
Key words: Drone Pratap, released ,from ,jail