ಬೆಂಗಳೂರು,ಜೂ,5,2019(www.justkannada.in): ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ ಮಳೆಗಾಗಿ ರಾಜ್ಯ ಸರ್ಕಾರ ದೇವರ ಮೊರೆ ಹೋಗಿದೆ. ಮಳೆಗಾಗಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಸರ್ಕಾರದ ವತಿಯಿಂ ವಿಶೇಷ ಪೂಜೆ ನಡೆಸುತ್ತಿದೆ.
ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸುವಂತೆ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸೂಚಿಸಿದ್ದು, ಈ ಹಿನ್ನೆಲೆ ಮುಜರಾಯಿ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಇಂದು ಚಾಮರಾಜನಗರದ ಹನೂರು ತಾಲ್ಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಸರ್ಕಾರದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಮಾದಪ್ಪನಿಗೆ ಬ್ರಾಹ್ಮಿ ಮುಹೂರ್ತದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ.
ಹಾಗೆಯೇ ರಾಮನಗರ ಜಿಲ್ಲೆಯ ಕಲ್ಲಳ್ಳಿ, ಬೆಳಗಾವಿಯ ಸವದತ್ತಿ ಯಲ್ಲಮ್ಮ ಸೇರಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಸರ್ಕಾರದ ವತಿಯಿಂದ ಪೂಜೆ ಸಲ್ಲಿಸಿ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.
Key words: Drought Background. Special worship in various temples by the Government.
#Drought #Specialworship #varioustemples #Government.