ಬೆಂಗಳೂರು,ಜನವರಿ,6,2024(www.justkannada.in): ಸಂಕಷ್ಟದಲ್ಲಿರುವ ರೈತರಿಗೆ ಕೂಡಲೇ ಬರ ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯದಲ್ಲಿ ರೈತ ವಿರೋಧಿ ಸರ್ಕಾರ ಇದೆ. ಎನ್ ಡಿಆರ್ ಎಫ್ ನಿಯಮ ಪ್ರಕಾರ ನಮ್ಮ ಸರ್ಕಾರ ಪರಿಹಾರ ನೀಡಿತ್ತು. ಹೆಕ್ಟೇರ್ ಗೆ 26 ಸಾವಿರ ರೂ. ಪರಿಹಾರ ನೀಡದ್ದವು ಈಗಿನ ಸರ್ಕಾರ. ಬರಿ 2 ಸಾವಿರ ರೂ. ನೀಡುವುದಾಗಿ ಹೇಳಿದೆ. ಸರ್ಕಾರದ ಈ ನಡೆ ರೈತರಿಗೆ ಮಾಡಿದ ಅಪಮಾನ ಎಂದು ಕಿಡಿಕಾರಿದರು.
ರಾಜ್ಯದ ರೈತರಿಗೆ ಸರ್ಕಾರ ಬರ ಪರಿಹಾರ ನೀಡಿಲ್ಲ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಸಂಕಷ್ಟದಲ್ಲಿರುವ ರೈತರಿಗೆ ಕೂಡಲೇ ಬರಪರಿಹಾರ ನೀಡಿ ಎಂದು ಆರ್.ಅಶೋಕ್ ಒತ್ತಾಯಿಸಿದರು.
Key words: drought relief – farmers-immediately- Opposition leader- R. Ashok