ಬೆಂಗಳೂರು,ಸೆಪ್ಟಂಬರ್,3,2020(www.justkannada.in): ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಾಂಗ್ರೆಸ್ ಕಾರ್ಪೋರೇಟರ್ ಪುತ್ರನಿಗೆ ವಿಚಾರಣೆಗೆ ಹಾಜರಾಗುವಂತೆ ಎನ್ ಸಿಬಿ ನೋಟಿಸ್ ಜಾರಿ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್ ಗೆ ಎನ್ ಸಿಬಿ ನೋಟೀಸ್ ಜಾರಿ ಮಾಡಿದೆ ಎನ್ನಲಾಗಿದೆ. ಮಾದಕ ದ್ರವ್ಯದ ಬಗ್ಗೆ ಮಾಹಿತಿ ಮತ್ತು ಡ್ರಗ್ಸ್ ಪೆಡ್ಲರ್ ಜತೆ ನಂಟು ಶಂಕೆ ಆಧಾರ ಮೇಲೆ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್ ಗೆ ಎನ್ ಸಿಬಿ ನೋಟೀಸ್ ನೀಡಿದೆ ಎನ್ನಲಾಗಿದೆ.
ಡ್ರಗ್ಸ್ ಪೆಡ್ಲರ್ ಜತೆ ನಂಟು ಶಂಕೆ ಮೇಲೆ ಕಳೆದ ಎರಡು ದಿನಗಳ ಹಿಂದೆ ಎನ್ ಸಿಬಿ ಕಾರ್ಪೋರೇಟರ್ ಕೇಶವಮೂರ್ತಿವರ ಮನೆ ಮೇಲೆ ದಾಳಿ ನಡೆಸಿತ್ತು. ನಂತರ ವಿಚಾರಣೆಗೆ ಹಾಜರಾಗುವಂತೆ ಯಶಸ್ ಗೆ ನೋಟೀಸ್ ನೀಡಲಾಗಿತ್ತು. ಸೆಪ್ಟಂಬರ್ 7ರೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇದೀಗ ನಾಳೆ ಬೆಳಿಗ್ಗೆ ವಿಚಾರಣೆಗೆ ಹಾಜರಾಗುವಂತೆ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್ ಗೆ ಎನ್ ಸಿಬಿ ಸೂಚಿಸಿದೆ. ವಿಚಾರಣೆಗೆ ಹಾಜರಾಗದಿದ್ದರೇ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.
Key words: Drugs –Case- NCB- notice – corporator- son – attend- hearing …