ಮೈಸೂರು, ಸೆಪ್ಟಂಬರ್,10,2020(www.justkannada.in): ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಲ್ಲ ಪಕ್ಷದವರು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿದ್ದಾರೆ. ಕ್ಯಾಸಿನೋ, ಬಾರ್, ಹುಕ್ಕಾ ಬಾರ್‌ಗಳ ಮಾಲೀಕರು ರಾಜಕಾರಣಿಗಳು. ಬೆಂಗಳೂರಿನ ಕಾರ್ಪೋಟರ್ ಗಳು ಇದ್ದಾರೆ. ನನ್ನ ಬಳಿ 32 ರಾಜಕಾರಣಿಗಳ ಪಟ್ಟಿ ಇದೆ. ಅದನ್ನು ಗೃಹ ಮಂತ್ರಿ, ಡಿಜಿಗೆ ಕಳುಹಿಸುತ್ತೇನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು.
ಮೈಸೂರಿನಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಪ್ರಮೋದ್ ಮುತಾಲಿಕ್, ಲವ್ ಜಿಹಾದಿ ಮಾದರಿಯಲ್ಲಿಯೇ ಡ್ರಗ್ಸ್ ಜಿಹಾದಿ ನಡೆಯುತ್ತಿದೆ. ಇದು ದೇಶಾದ್ಯಂತ ವ್ಯಾಪಿಸಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇದರ ಮೂಲ ರೂವಾರಿ. ಪಂಜಾಬ್, ಗುಜರಾತ್, ಗೋವಾ ಮೂಲಕ ಡ್ರಗ್ಸ್ ದೇಶಕ್ಕೆ ಪ್ರವೇಶಿಸುತ್ತಿದೆ. ಇದರಲ್ಲಿ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷದವರು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿದ್ದಾರೆ. ಹೊಂದಾಣಿಕೆ ರಾಜಕಾರಣದ ಮೂಲಕ ಎಲ್ಲವನ್ನೂ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಬಗ್ಗೆ ಗಮನ ಸೆಳೆದಿದ್ದ ನನ್ನನ್ನು ಟಾರ್ಗೆಟ್ ಮಾಡಿದರು. ಆಗಲೇ ಇದನ್ನು ಮಟ್ಟ ಹಾಕಿದ್ದರೆ ಇಷ್ಟೊಂದು ದೊಡ್ಡ ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ ಎಂದು ಪ್ರಮೋದ್ ಮುತಾಲಿಕ್ ತಿಳಿಸಿದರು.
ದೆಹಲಿ ಪೊಲೀಸರು ಬಂದು ದಾಳಿ ಮಾಡುವವರೆಗೂ ರಾಜ್ಯ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು. ಗುಪ್ತಚರ ಇಲಾಖೆಯವರು ಕತ್ತೆ ಕಾಯುತ್ತಿದ್ರಾ..? ಎಂದು ಕಿಡಿಕಾರಿದ ಪ್ರಮೋದ್ ಮುತಾಲಿಕ್, ಕ್ಯಾಸಿನೋ, ಬಾರ್, ಹುಕ್ಕಾ ಬಾರ್‌ಗಳ ಮಾಲೀಕರು ರಾಜಕಾರಣಿಗಳಾಗಿದ್ದಾರೆ. ಬೆಂಗಳೂರಿನ ಕಾರ್ಪೋಟರ್ ಗಳು ಇದ್ದಾರೆ. ನನ್ನ ಬಳಿ 32 ರಾಜಕಾರಣಿಗಳ ಪಟ್ಟಿ ಇದೆ. ಅದನ್ನು ಗೃಹ ಮಂತ್ರಿ, ಡಿಜಿಗೆ ಕಳುಹಿಸುತ್ತೇನೆ ಎಂದರು.
Key words: Drugs – state-mysore- Pramod Muthalik – list -32 politicians.