ಬೆಂಗಳೂರು, ಜುಲೈ 22, 2023 (www.justkannada.in): ಅರುಣಾಚಲ ಪ್ರದೇಶದ ತವಾಂಗ್ನಲ್ಲಿ ಇಂದು ಬೆಳಗ್ಗೆ ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 3.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
ಬೆಳಗ್ಗೆ 6:56ಕ್ಕೆ ಅರುಣಾಚಲ ಪ್ರದೇಶದ ತವಾಂಗ್ ಬಳಿ ಭೂಮಿಯಿಂದ 5 ಕಿಲೋಮೀಟರ್ ಆಳದಲ್ಲಿ 3.3 ತೀವ್ರತೆಯ ಭೂಕಂಪ ಸಂಭವಿಸಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿದೆ. ಭೂ ಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ ಎಂದು ಭೂಕಂಪಶಾಸ್ತ್ರ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.