ಮಂಡ್ಯ,ಫೆಬ್ರವರಿ,22,2023(www.justkannada.in): ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಮೀನು ತಿಂದು ಧರ್ಮಸ್ಥಳಕ್ಕೆ ಹೋಗಿದ್ದು ದೊಡ್ಡ ವಿವಾದವಾಗಿತ್ತು. ಇದೀಗ ಇಂಥದ್ದೇ ವಿವಾದದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಿಲುಕಿದ್ದು ಈ ಬಗ್ಗೆ ಶಾಸಕ ಸಿ.ಟಿ ರವಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಂಡ್ಯದಲ್ಲಿ ಮಾತನಾಡಿರುವ ಅವರು, ನಾನು ಮಾಂಸಾಹಾರ ಸೇವಿಸಿದ್ದು ನಿಜ, ಆದರೆ ದೇವಸ್ಥಾನದೊಳಗೆ ಮಾತ್ರ ಹೋಗಿಲ್ಲ. ದೇವಸ್ಥಾನದ ಬಾಗಿಲು ಹಾಕಿದ್ದರಿಂದ ಹೊರಗಿನಿಂದಲೇ ದೇವರಿಗೆ ನಮಸ್ಕಾರ ಮಾಡಿ ಹಿಂತಿರುಗಿದ್ದೇನೆ ಎಂದು ಹೇಳಿದರು.
ಅಲ್ಲದೆ ನಾನು ಹುಟ್ಟಿರೋದೇ ಮಾಂಸ ತಿನ್ನೋ ಜಾತಿಯಲ್ಲಿ. ಮಾಂಸ ತಿಂದು ದೇವಸ್ಥಾನಕ್ಕೆ ಹೋಗ್ತೇನೆ ಏನೀವಾಗ ಎಂದು ಹೇಳಲ್ಲ ಎನ್ನುವ ಮೂಲಕ ಮಾಜಿ ಸಿಎಂ ಸಿದ್ಧರಾಮಯ್ಯಗೆ ಸಿಟಿ ರವಿ ಟಾಂಗ್ ನೀಡಿದರು.
ಫೆಬ್ರವರಿ 19 ರಂದು ಭಾನುವಾರ ಉತ್ತರ ಕನ್ನಡ ಜಿಲ್ಲೆಗೆ ಶಾಸಕ ಸಿ.ಟಿ.ರವಿ ಭೇಟಿ ನೀಡಿದ್ದರು. ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ್ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸವಿದಿದ್ದರು. ನಂತರ ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಸಿ.ಟಿ.ರವಿ ಭೇಟಿ ನೀಡಿದ್ದರು ಎಂಬ ಆರೋಪ ಕೇಳಿ ಬಂದಿದೆ.
Key words: eat -meat – temple – CT Ravi -Tong – Siddaramaiah