ಬೆಂಗಳೂರು,ಆಗಸ್ಟ್,5,2021(www.justkannada.in): ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರತಿಪಕ್ಷಗಳನ್ನು ಹೆದರಿಸುವ ಕೆಲಸ ಮಾಡುತ್ತಿದೆ. ಐಟಿ, ಇಡಿ ಬಳಸಿಕೊಂಡು ಕಿರುಕುಳ ನೀಡುವ ಬಿಜೆಪಿಯ ವರ್ತನೆ ಖಂಡನೀಯ ಕಿಡಿಕಾರಿದ್ದಾರೆ.
ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸ , ಕಚೇರಿ, ಫ್ಲ್ಯಾಟ್ ಮೇಲೆ ಏಕಕಾಲಕ್ಕೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಇದರ ಜೊತೆಗೆ ಜಮೀರ್ ಅಹ್ಮದ್ ಖಾನ್ ಅವರಿಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೂ ದಾಳಿ ನಡೆಸಲಾಗಿದೆ.
Key words: ED -attack – MLA- Jameer ahamad khan-house -politically motivated-Former CM Siddaramaiah