ನವದೆಹಲಿ, ಮಾರ್ಚ್, 28, 2024 (www.justkannada.in): ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗೆ ಮತ್ತೆ ನಾಲ್ಕು ದಿನಗಳ ಕಾಲ ಇಡಿ ಕಸ್ಟಡಿ ವಿಸ್ತರಣೆ ಮಾಡಿ ರೋಸ್ ಅವೆನ್ಯೂ ಕೋರ್ಟ್ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು. ನಂತರ 6 ದಿನಗಳ ಅವರು ಇಡಿ ಕಸ್ಟಡಿಗೆ ವಹಿಸಲಾಗಿತ್ತು. ಇಂದು ಅರವಿಂದ ಕೇಜ್ರಿವಾಲ್ ಅವರನ್ನ ರೋಸ್ ಅವೆನ್ಯೂ ಕೋರ್ಟ್ಗೆ ಕರದುಕೊಂಡು ಬರಲಾಗಿತ್ತು.
ಇದೀಗ ಕೋರ್ಟ್ ಮತ್ತೆ 4 ದಿನ ಇಡಿ ಕಸ್ಟಡಿ ವಿಸ್ತರಣೆ ಮಾಡಿದೆ. ಏಪ್ರಿಲ್ 1ರವರೆಗೆ ಇಡಿ ಕಸ್ಟಡಿ ಅವಧಿ ವಿಸ್ತರಣೆ ಮಾಡಲಾಗಿದೆ. ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ ಕೇಜ್ರಿವಾಲ್ ಅವರನ್ನು ಮಾರ್ಚ್ 22ರಂದು ಇಡಿ ಸಂಬಂಧಿಸಿತ್ತು. ಆರು ದಿನಗಳ ಇಡಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಇಂದು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು.
Key words: ED, custody, Arvind Kejriwal