ನವದೆಹಲಿ, ಸೆ.16,2019(www.justkannada.in): ಇಡಿ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿಗೆ ಜಾರಿ ನಿರ್ದೇಶನಾಲಯ ಇಂದು ಆಕ್ಷೇಪಣೆ ಸಲ್ಲಿಸಲಿದೆ.
ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಇಡಿ ವಿಚಾರಣೆ ಎದುರಿಸುತ್ತಿರುವ ಡಿ.ಕೆ.ಶಿವಕುಮಾರ್ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ಧಾರೆ. ನಾಳೆ ಡಿ.ಕೆ ಶಿವಕುಮಾರ್ ಇಡಿ ಕಸ್ಟಡಿ ಅಂತ್ಯವಾಗಲಿದೆ. ಇನ್ನು ಮಾಜಿ ಸಚಿವ ಡಿ.ಕೆ ಶಿವಕುಮಾರ್ ರನ್ನ ಹೊರಗಡೆ ಕಳುಹಿಸಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಇನ್ನು ಮತ್ತಷ್ಟು ವಿಚಾರಣೆ ಮಾಡಬೇಕಿದೆ. ಹೀಗಾಗಿ ಜಾಮೀನು ನೀಡಬಾರದು ಎಂದು ಇಡಿ ಅಧಿಕಾರಿಗಳು ವಿಶೇಷ ಕೋರ್ಟ್ ಗೆ ಮನವಿ ಮಾಡಿದ್ದಾರೆ.
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ತೀವ್ರ ರಕ್ತದೊತ್ತಡದ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಆರ್ ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಳೆ ಇಡಿ ಕಸ್ಟಡಿ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಡಿ ಮತ್ತೆ ತಮ್ಮ ವಶಕ್ಕೆ ಕೇಳುವ ಸಾಧ್ಯತೆ ಇದೆ.
Key words: ED – file- Objection-former minister DK Sivakumar-bail