ಬೆಂಗಳೂರು ಜುಲೈ 13,2024 (www.justkannada.in): ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು 6 ದಿನಗಳ ಕಾಲ ಜಾರಿ ನಿರ್ದೇಶನಾಯ(ಇಡಿ) ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.
ವಾಲ್ಮೀಕಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ವಶಕ್ಕೆ ಪಡೆದಿತ್ತು. ನಾಗೇಂದ್ರ ಅವರ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡಿದ್ದರು.
ಈ ಮಧ್ಯೆ ನಿನ್ನೆ ನಾಗೇಂದ್ರ ಅವರನ್ನು ವಿಚಾರಣೆ ನಡೆಸಿ ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಇಡಿ ಅಧಿಕಾರಿಗಳು ಮನವಿ ಮಾಡಿದ್ದರು. ಆದರೆ ಕೋರ್ಟ್ ನಾಗೇಂದ್ರ ಅವರನ್ನು ಜುಲೈ 18ರವರೆಗೆ ಇಡಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.
Key words: ED, Former Minister, B.Nagendra, custody