ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ಇಡಿ ನೋಟಿಸ್

ಬೆಂಗಳೂರು, ಜನವರಿ 27,2025 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ಇಂದೇ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.

ಇಂದು ಮತ್ತು ನಾಳೆ  (ಮಂಗಳವಾರ)  ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ED) ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್  ಸಮನ್ಸ್ ನೀಡಿದೆ.  ಇಡಿ ನೋಟಿಸ್​ ನೀಡುತ್ತಿದ್ದಂತೆ ಸಮನ್ಸ್ ಪ್ರಶ್ನಿಸಿ  ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.

ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಮಾಡಿದ್ದು, ಕೊನೆಯಲ್ಲಿ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದ್ದಾರೆ.

Key words: ED, notice, CM Siddaramaiah,  wife, Minister, Bhairati Suresh