ನಕಲಿ ಚಿನ್ನ ಅಡವಿಟ್ಟು ಸಾಲ ಕೊಟ್ಟಿದ್ದ ಕೇಸ್: ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷರು ಸೇರಿ ಮೂವರ ಮೇಲೆ ಇಡಿ ದಾಳಿ

ಶಿವಮೊಗ್ಗ, ಏಪ್ರಿಲ್, 8,2025 (www.justkannada.in): ಶಿವಮೊಗ್ಗದ ಗಾಂಧಿ ಬಜಾರ್ ನಗರದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸೇರಿ ಮೂವರ ಮೇಲೆ  ಜಾರಿ ನಿರ್ದೇಶನಾಲಯ ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದೆ.

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥಗೌಡ ನಿವಾಸದ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ಮಂಜುನಾಥಗೌಡನನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಅಪೇಕ್ಸ್ ಬ್ಯಾಂಕ್ ಗೆಸ್ಟ್ ಹೌಸ್ ನಲ್ಲಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳಿಂದ ಮಂಜುನಾಥಗೌಡ ವಿಚಾರಣೆ ನಡೆಯುತ್ತಿದೆ.

ಡಿಸಿಸಿ ಬ್ಯಾಂಕ್ ಮ್ಯಾನೇಜರ್​ ಆಗಿದ್ದ ಶೋಭಾ ಎಂಬುವವರ ಮನೆ ಮೇಲೂ  ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಶೋಭಾ ನಿವಾಸದ ಮೇಲೆ ಇಂದು ದಾಳಿ ನಡೆದಿದೆ.

ಬ್ಯಾಂಕ್​ನ ವಾಹನ ಚಾಲಕನಾಗಿದ್ದ ಶಿವಕುಮಾರ್ ಮನೆ ಮೇಲೂ ಕೂಡ ಇಡಿ ಅಧಿಕಾರಿಗಳು ದಾಳಿ  ನಡೆಸಿದ್ದಾರೆ. 2 ಕಡೆ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. 2014ರ ಜೂನ್​ನಲ್ಲಿ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಈ ಹಗರಣ ನಡೆದಿತ್ತು. ಇದೇ ವೇಳೆ ಬ್ಯಾಂಕ್ ನ ವಾಹನ ಚಾಲಕನಾಗಿದ್ದ ನಿವಾಸದ ಮೇಲು ದಾಳಿ ನಡೆಸಲಾಗಿದೆ. ಕಾಮಾಕ್ಷಿ ಬೀದಿಯ ಶಿವಕುಮಾರ್ ಎಂಬುವರ ಮನೆ ಮೇಲು ಇಡಿ ತಂಡದ ಪ್ರತ್ಯೇಕ ದಾಳಿ ನಡೆಸಿದೆ. ಏಕಕಾಲಕ್ಕೆ ಎರಡು ಪ್ರತ್ಯೇಕ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

ಶಿವಮೊಗ್ಗದ ಗಾಂಧಿ ಬಜಾರ್ ನಗರದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಕಳೆದ 11 ವರ್ಷಗಳ ಹಿಂದೆ ಹಗರಣ ನಡೆದಿತ್ತು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ತನಿಖೆ ನಡೆಸಿ ಪೊಲೀಸರು 2014ರ ಅ.18ರಂದು ಚಾರ್ಜ್​ಶೀಟ್​ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯಕ್ಕೆ ಮೊದಲ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಮಂಜುನಾಥ್ ಗೌಡರಿಗೆ  ಇಡಿ ಸಮನ್ಸ್ ಜಾರಿಗೊಳಿಸಿತ್ತು. ಕಳೆದ ವಾರವಷ್ಟೇ ಇಡಿ ಸಮನ್ಸ್ ಪ್ರಶ್ನಿಸಿದ್ದ ಮಂಜುನಾಥ್ ಗೌಡ ಅವರ ಮೇಲ್ಮನವಿಯನ್ನು ಹೈಕೋರ್ಟ್​ ವಜಾಗೊಳಿಸಿತ್ತು.

Key words: Fake gold, loan case,  ED raids , Shimoga, former DCC Bank president