ಮೈಸೂರು,ಅಕ್ಟೋಬರ್,22,2022(www.justkannada.in): ಶಾಲೆಗಳಲ್ಲಿ ಪೋಷಕರಿಂದ ಹಣ ಸಂಗ್ರಹ ವಿಚಾರ ಕುರಿತು ಪ್ರತಿಕ್ರಿಯಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್. ಇದು ಶಿಕ್ಷಣ ಮಂತ್ರಿಗಾಗಲಿ, ಮುಖ್ಯಮಂತ್ರಿಗಳಗಾಗಲಿ ಸಂಬಂಧಿಸಿದಿದ್ದಲ್ಲ. ಶಿಕ್ಷಣ ಇಲಾಖೆ ಆಯುಕ್ತರು ಹೊರಡಿಸಿರುವ ಸುತ್ತೋಲೆ ಇದು ಎಂದು ಸ್ಪಷ್ಟನೆ ನೀಡಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಬಿ.ಸಿ ನಾಗೇಶ್, ಕೆಲವರು ಸರಿಯಾಗಿ ಓದಿಕೊಳ್ಳದೆ ಪ್ರತಿಕ್ರಿಯೆ ನೀಡಿದರು. ತಕ್ಷಣ ನಾನು ಆಯುಕ್ತರನ್ನು ಕೇಳಿದೆ. ಶಾಲೆಗಳಲ್ಲಿ ಎಸ್ಡಿಎಂಸಿ ಸಮಿತಿ ಸಲಹೆ ಮೇರೆಗೆ ಈ ಸುತ್ತೋಲೆ ತರಲಾಗಿದೆ. ಆರ್ಟಿಇ ಕಾಯ್ದೆಯಲ್ಲಿ ಇದಕ್ಕೆ ಅವಕಾಶ ಇದೆ. ಎಲ್ಲಿಯೂ ಪೋಷಕರು ಕಡ್ಡಾಯವಾಗಿ ಹಣ ಕೊಡಬೇಕು ಎಂದು ಹೇಳಿಲ್ಲ. ಅವರಾಗಿಯೇ ಕೊಟ್ಟರೆ, 100 ರೂಪಾಯಿ ವರೆಗೆ ಪಡೆದು ರಶೀದಿ ಕೊಡಬೇಕು.
ಆದರೆ ದೇಶದಲ್ಲೇ ಕಾನೂನು ಪಂಡಿತ ಎನಿಸಿಕೊಂಡ ಸಿದ್ದರಾಮಯ್ಯ ಇದರಲ್ಲಿ ರಾಜಕೀಯ ಮಾಡೋದು ಸರಿಯಲ್ಲ. ಸಿದ್ದರಾಮಯ್ಯ ಸರ್ಕಾರವೇ ಆರ್ಟಿಇ ಜಾರಿ ಮಾಡಿದ್ದು. ಕಾಯ್ದೆಯಲ್ಲಿ ಎಸ್ಡಿಎಂಸಿಗೆ ಅಧಿಕಾರ ಕೊಟ್ಟಿದ್ದಾರೆ. ಅಲ್ಲಿ ಎಲ್ ಕೆಜಿ ಹಾಗೂ ಯುಕೆಜಿ ತರಗತಿ ಶುರು ಮಾಡಿದ್ದಾರೆ. ಅವರಿಗೆ ಸಂಭಾವನೆ ಕೊಡುವ ನಿಟ್ಟಿನಲ್ಲಿ ಆಯಾ ಎಸ್ಡಿಎಂಸಿ ತೀರ್ಮಾನ ಮಾಡುತ್ತವೆ. ಇದು ದುರುಪಯೋಗ ಆದರೆ ಹಿಂಪಡೆಯಲಾಗುವುದು ಎಂದು ಸಚಿವ ಬಿ.ಸಿ ನಾಗೇಶ್ ತಿಳಿಸಿದರು.
Key words: Education Minister- BC Nagesh -clarification – collection – money -schools.