ಬೆಂಗಳೂರು,ಏಪ್ರಿಲ್,19,2021(www.justkannada.in): ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ಎಚ್.ಜೆ. ರಮೇಶ್ ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ರಮೇಶ್ ಅವರಿಗೆ ಕಳೆದ ಒಂದು ವಾರದ ಹಿಂದೆ ಕೊರೋನಾ ಸೋಂಕು ದೃಢಪಟ್ಟಿತ್ತು. ರಮೇಶ್ ಅವರನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಕಾರಣ ಇಂದು ಸಾವನ್ನಪ್ಪಿದ್ದಾರೆ. ಈ ನಡುವೆ ರಮೇಶ್ ಅವರು ವೆಂಟಿಲೇಟರ್ ಸಿಗದೆ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ರಮೇಶ್ ಅವರಿಗೆ ಉಸಿರಾಟ ಸಮಸ್ಯೆ ಎದುರಾದಾಗ, ತಕ್ಷಣ ಅಗತ್ಯ ಪ್ರಮಾಣದಲ್ಲಿ ಆಕ್ಸಿಜನ್ ಸಿಗಲಿಲ್ಲ. ಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿದೆ ಎನ್ನಲಾಗಿದೆ.
ಇನ್ನು ಆಪ್ತ ಸಹಾಯಕ ರಮೇಶ್ ಸಾವಿನ ಬಗ್ಗೆ ತಮ್ಮ ಫೇಸ್ಬುಕ್ ನಲ್ಲಿ ಸುರೇಶ್ಕುಮಾರ್ ಸಂತಾಪ ಸೂಚಿಸಿದ್ದಾರೆ, ‘ನಮ್ಮ ಕ್ಷೇತ್ರದ (ರಾಜಾಜಿನಗರ) ಅನೇಕರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಉಳಿಸಿದ್ದ, ನನ್ನ ಆಪ್ತ ಸಹಾಯಕ ಎಚ್.ಜೆ. ರಮೇಶ್ ಇನ್ನಿಲ್ಲ. ರಮೇಶ್ ಸುಮಾರು ಎಂಟು ವರ್ಷ ನನ್ನೊಡನೆ ನಗು ನಗುತ್ತಾ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ’ಎಂದು ತಿಳಿಸಿದ್ದಾರೆ.
Key words: Education Minister -Suresh Kumar’s-PA- Corona-death