ಬೆಂಗಳೂರು,ಆಗಸ್ಟ್,2022(www.justkannada.in): ಮಳೆ ಹಾನಿ ಪ್ರದೇಶಗಳ ವೀಕ್ಷಣೆಗೆಂದು ಪ್ರವಾಸ ಕೈಗೊಂಡಿದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೊಡಗಿನಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಮೊಟ್ಟೆ ಎಸೆ ಹೋಗಿದ್ದಾಗ ಕೆಲ ಕಿಡಿಗೇಡಿಗಳು ಸಿದ್ದು ವಿರುದ್ಧ ಘೋಷಣೆ ಕೂಗಿ, ಅವರ ಕಾರಿನ ಮೇಲೆ ಕಾರಿಗೆ ಮೊಟ್ಟೆ ಎಸೆಯಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿಂದತೆ ಶಾಸಕರ ಭವನಕ್ಕೂ ಮೊಟ್ಟೆ ಬಿಸಿ ತಟ್ಟಿದ್ದು, ಶಾಸಕರ ಭವನದಲ್ಲಿ ಮೊಟ್ಟೆ ಬ್ಯಾನ್ ಮಾಡಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ದಾಳಿ ಸಾಧ್ಯತೆ ಹಿನ್ನೆಲೆ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ ಬೊಪಯ್ಯ ಕೊಠಡಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಈ ಹಿಂದೆ ಯತ್ನಾಳ್ ಕೊಠಡಿ ಮೇಲೆ ಕೈ ಕಾರ್ಯಕರ್ತರು ದಾಳಿ ಮಾಡಿದ್ದರು.
ಮೊನ್ನೆ ಕೊಡಗಿನಲ್ಲಿ ಸಿದ್ಧರಾಮಯ್ಯ ನೆರೆ ಹಾನಿ ವೀಕ್ಷಣೆಗೆ ತೆರಳಿದ್ದಾಗ. ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿ ಈ ಸಮಯದಲ್ಲಿ ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆಯಲಾಗಿತ್ತು. ಇದರಿಂದ ರೊಚ್ಚಿಗೆದ್ಧ ಕಾಂಗ್ರೆಸ್ ಕಾರ್ಯಕರ್ತರು ನಿನ್ನ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ಧರು.
Key words: Egg- Ban -Tight security – MLA- chamber.