ಬೆಂಗಳೂರು, ಸೆಪ್ಟೆಂಬರ್ 30,2024 (www.justkannada.in): ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ದ ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಆದರ್ಶ ಅಯ್ಯರ್ ಅವರು ಬೆಂಗಳೂರಿನ ತಿಲಕ್ ನಗರ ಠಾಣೆಗೆ ದೂರು ದಾಖಲಿಸಿದ್ದರು. ಈ ಕುರಿತು ಎಫ್ ಐಆರ್ ದಾಖಲಾಗಿತ್ತು. ನಂತರ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು (ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ಹೈಕೋರ್ಟ್ ಮುಂದೂಡಿಕೆ ಮಾಡಿದೆ. . ಮುಂದಿನ ವಿಚಾರಣೆವರೆಗೂ ತನಿಖೆ ನಡೆಸದಂತೆ ತಡೆ ನೀಡಿದೆ. ಈ ಮೂಲಕ ನಳೀನ್ ಕುಮಾರ್ ಕಟೀಲ್ ಜೊತೆಗೆ ಇನ್ನಿತರರಿಗೂ ರಿಲೀಫ್ ಸಿಕ್ಕಂತಾಗಿದೆ.
Key words: Election bond, case, BJP leaders, High Court, stay