ವಿಜಯಪುರ,ಮೇ,2,2023(www.justkannada.in): ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿಗಳಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. 50 ಜನ ಚುನಾವಣಾ ಅಧಿಕಾರಿಗಳಿದ್ದ, ಕೆಎಸ್ಆರ್ಟಿಸಿ ಬಸ್ ಸಿಂದಗಿ ಪಟ್ಟಣದತ್ತ ತೆರಳುತ್ತಿತ್ತು. ಈ ವೇಳೆ ಆಕ್ಸೆಲ್ ತುಂಡಾಗಿದ್ದರಿಂದ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.
ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, 12 ಜನ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Key words: election –duty- training – bus – overturned-vijayapur