ಧಾರವಾಡ,ಮೇ,2,2023(www.justkannada.in): ಚುನಾವಣೆ ಬಳಿಕ ಮಹದಾಯಿ ಯೋಜನೆ ಕಾಮಗಾರಿ ಆರಂಭ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ನವಲಗುಂದದಲ್ಲಿ ಬಿಜೆಪಿ ಅಭ್ಯರ್ಥಿ ಮುನೇನಕೊಪ್ಪ ಪರ ಸಿಎಂ ಬಸವರಾಜ ಬೊಮ್ಮಾಯಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಹದಾಯಿ ಯೋಜನೆಯ ಹೋರಾಟಕ್ಕೆ ಕಾಂಗ್ರೆಸ್ ಅಡ್ಡಿಪಡಿಸಿತ್ತು. ಮಹದಾಯಿ ಹೋರಾಟಗಾರರ ಮೇಲೆ ಕಾಂಗ್ರೆಸ್ ಗುಂಡು ಹಾರಿಸಿತ್ತು, ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿಸಿದ್ದು ಕೂಡ ಇದೇ ಕಾಂಗ್ರೆಸ್ ಎಂದು ಆರೋಪಿಸಿದರು.
ಹೀಗಾಗಿ ಇಂತಹ ಪಕ್ಷಕ್ಕೆ ನೀವು ಮತ ಹಾಕುತ್ತೀರಾ ಎಂದು ಪ್ರಶ್ನಿಸಿದ ಸಿಎಂ ಬೊಮ್ಮಾಯಿ, ಮಹದಾಯಿ ಯೋಜನೆಗೆ ಡಿಪಿಆರ್ ಗೆ ಮೋದಿ ಸರ್ಕಾರ ಅನುಮತಿ ನೀಡಿದೆ. ಮಹದಾಯಿ ಯೋಜನೆಗೆ ಟೆಂಡರ್ ಕೂಡ ಮಾಡಿದ್ದೇವೆ. ಚುನಾವಣೆ ಬಳಿಕ ಯೋಜನೆಯ ಕಾಮಗಾರಿ ಆರಂಭವಾಗಲಿದೆ ಎಂದರು.
Key words: election- Mahadayi- Yojana – work – started- CM Basavaraja Bommai.