ಬೆಂಗಳೂರು,ಏಪ್ರಿಲ್,12,2025 (www.justkannada.in): ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು.
ಹುಬ್ಬಳ್ಳಿ ಧಾರವಾಡದಲ್ಲಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಅಂಕಿತ ಹಾಕಲಾಯಿತು. ಯೋಜನೆ ಅನುಷ್ಠಾನ ಕುರಿತು ಮೂರು ತಿಂಗಳ ಒಳಗಾಗಿ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.
ಇದು ಸಂಪೂರ್ಣ ವಿದ್ಯುತ್ ಚಾಲಿತ ವ್ಯವಸ್ಥೆಯಾಗಿದ್ದು ನಗರದಲ್ಲಿ ಎತ್ತರಿಸಿದ ರಸ್ತೆ ಹಾಗೂ ಇತರೆಡೆ ನೆಲದ ಮೇಲೆ ಸಂಚರಿಸಲಿದೆ. ಇದರಲ್ಲಿ 250 ಜನರು ಒಮ್ಮೆಗೆ ಪ್ರಯಾಣಿಸಬಹುದಾಗಿದೆ. ಕಳೆದ ಒಂದು ವರ್ಷದಿಂದ ಯೋಜನೆ ಕಾರ್ಯ ಸಾಧ್ಯತೆ ಬಗ್ಗೆ ಅಧ್ಯಯನ ನಡೆಸಲಾಗಿದೆ. ಮೆಟ್ರೋ ಮಾದರಿಯ ಈ ಸಂಚಾರಿ ವ್ಯವಸ್ಥೆ ಯುರೋಪಿನ ಹಲವು ರಾಷ್ಟ್ರಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಸಂಸ್ಥೆಗಳ ಪ್ರತಿನಿಧಿಗಳು ಮಾಹಿತಿ ನೀಡಿದರು.
ಹುಬ್ಬಳ್ಳಿ ಧಾರವಾಡದಲ್ಲಿ ಈ ಯೋಜನೆ ಯಶಸ್ವಿಯಾದರೆ, ರಾಜ್ಯದ ಇತರ ಎರಡನೇ ಹಂತದ ನಗರಗಳಿಗೂ ಇದನ್ನು ವಿಸ್ತರಿಸಬಹುದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಸ್ವಿಜ್ಡರ್ಲ್ಯಾಂಡ್ ಹೋಗಿ ಯೋಜನೆಯ ಪ್ರಾಯೋಗಿಕ ಯಶಸ್ಸನ್ನು ಅಧ್ಯಯನ ನಡೆಸಿದ್ದರು. ಮುಖ್ಯಮಂತ್ರಿಗಳಿಗೆ ಉದ್ದೇಶಿತ ಯೋಜನೆಯ ಸಾಧ್ಯಾ ಸಾಧ್ಯತೆಗಳನ್ನು, ಅವಕಾಶಗಳನ್ನು ಸಚಿವ ಸಂತೋಷ್ ಲಾಡ್ ವಿವರಿಸಿದರು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಮಾಜ ಕಲ್ಯಾಣ ಸಚಿವ ಮಹಾದೇವಪ್ಪ, ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಇಎಸ್ಎಸ್ ಎಜಿ ಸಂಸ್ಥೆಯ ಸುಸಾನ್ ವಾನ್ ಸುರಿ, ಎಸ್ಎಸ್ಬಿ ಸಂಸ್ಥೆಯ ನಿರ್ದೇಶಕ ಬುರಾಕ್ ಸೆನಸರ್ ಮತ್ತಿತರರು ಉಪಸ್ಥಿತರಿದ್ದರು.
ENGLISH SUMMARY
Key Points from Today’s Meeting on Hubballi-Dharwad Electric Rapid Transit Project in Kaveri, Chaired by CM Siddaramaiah:
* A Memorandum of Understanding (MoU) was signed with HESS AG, HESS INDIA, and SSB AG to launch a pilot Electric Rapid Transit (e-RT)project between Hubballi and Dharwad.
* The Chief Minister instructed officials to prepare a Detailed Project Report (DPR) within three months for implementation.
* This initiative aims to provide eco-friendly, efficient urban transport for Hubballi-Dharwad.
* The fully electric system will run on elevated roads and at ground level in some areas, with a capacity of 250 passengers per trip. Feasibility studies have been conducted over the past year.
* Representatives from the companies stated that this metro-style transit system has been successfully implemented in several European countries.
* CM Siddaramaiah mentioned that if the project succeeds, it could be extended to other tier-2 cities in Karnataka.
* Transport Minister Ramalinga Reddy, Labour Minister Santosh Lad, Social Welfare Minister Mahadevappa, Advocate General Shashikiran Shetty, Chief Secretary Shalini Rajneesh, Representatives from HESS AG and SSB AG, Switzerland including Susan von Sury, Yves Siegrist, Burak Sencer, and Francois Paetzold were present
Key words: Hubballi-Dharwad, Electric Rapid Transit Project, CM, Siddaramaiah