ಬೆಂಗಳೂರು,ಮೇ,16,2019(www.justkannada.in): ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುತ್ ಸರಬರಾಜು ಕಂಪನಿಗಳು ಮನವಿ ಸಲ್ಲಿಸಿದ ಹಿನ್ನೆಲೆ ಜೂನ್ ತಿಂಗಳಲ್ಲಿ ವಿದ್ಯುತ್ ದರ ಪರಿಷ್ಕರಣೆ ನಡೆಯುವ ಸಾಧ್ಯತೆ ಇದೆ.
2018 ನವೆಂಬರ್ ನಲ್ಲೇ ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುತ್ ಸರಬರಾಜು ಕಂಪನಿಗಳು ಕೆಇಆರ್ ಸಿಗೆ ಪ್ರಸ್ತಾಪ ಸಲ್ಲಿಸಿದ್ದವು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆ ವಿದ್ಯುತ್ ದರ ಏರಿಕೆಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬ್ರೇಕ್ ಹಾಕಿದ್ದರು.
ಇದೀಗ ಮತ್ತೆ ವಿದ್ಯುತ್ ದರ ಏರಿಕೆಗೆ ವಿದ್ಯುತ್ ಸರಬರಾಜು ಕಂಪನಿಗಳು ಮನವಿ ಮಾಡಿವೆ. ಹೀಗಾಗಿ ಈಗ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಫಲಿತಾಂಶ ಬಂದ ಬಳಿಕ ವಿದ್ಯುತ್ ದರ ಪರಿಷ್ಕರಣೆಗೆ ಸರ್ಕಾರ ಮುಂದಾಗಲಿದೆ ಎನ್ನಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಜನರಿಗೆ ಜೂನ್ ತಿಂಗಳಲ್ಲಿ ವಿದ್ಯುತ್ ದರ ಏರಿಕೆ ಬಿಸಿ ತಟ್ಟುವ ಸಾಧ್ಯತೆ ಇದೆ.
Key words: Electricity –charges – rise – June