ಕರ್ನಾಟಕದಲ್ಲಿ ಅತಿ ಹೆಚ್ಚು ಕೈಗಾರಿಕಾ ಸ್ನೇಹಿ ವಾತಾವರಣ
ಬೆಂಗಳೂರು, ಜೂನ್ 6, 2023 (www.justkannada.in):
ರಾಜ್ಯದಲ್ಲಿ ಕೈಗಾರಿಕಾ ವಲಯವು ಅತಿ ಹೆಚ್ಚು ಉದ್ಯೋಗ ಸೃಷ್ಟಿಸುವ ಸಾಮರ್ಥ್ಯ ಹೊಂದಿರುವ ಹಿನ್ನೆಲೆಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಇಂದು ತಮ್ಮನ್ನು ಭೇಟಿಯಾದ ಸಿಐಐ ಕರ್ನಾಟಕದ ಅಧ್ಯಕ್ಷ ವಿಜಯ್ ಕೃಷ್ಣನ್ ವೆಂಕಟೇಶನ್ ನೇತೃತ್ವದ ನಿಯೋಗ ದೊಂದಿಗೆ ಮಾತುಕತೆ ನಡೆಸಿದರು. ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ ಕೌಶಲ್ಯಾಭಿವೃದ್ಧಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಲಾಗಿತ್ತು. ಈ ಅವಧಿಯಲ್ಲಿ ಯುವಕರ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿರು.
ಇದಲ್ಲದೆ ಕೈಗಾರಿಕಾ ಸಂಸ್ಥೆಗಳು ಮತ್ತು ಸರ್ಕಾರದ ನಡುವೆ ಪರಸ್ಪರ ಸಹಕಾರ, ಎಂಎಸ್ ಎಂಇ ಗಳಿಗೆ ಉತ್ತೇಜನ, ಸಾಮರ್ಥ್ಯ ಅಭಿವೃದ್ಧಿಗೆ ನೆರವು, ಮೊದಲಾದ ವಿಷಯಗಳ ಕುರಿತು ಚರ್ಚಿಸಲಾಯಿತು. ಸಂಸ್ಥೆಯ ಪದಾಧಿಕಾರಿಗಳಾದ ವೋಲ್ವೋ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ, ಅಮನ್ ಚೌಧುರಿ, ರಾಧಿಕಾ ಧಾಲ್ ಹಾಗೂ ನಾರಾಯಣ ರಾವ್ ಅವರು ಉಪಸ್ಥಿತರಿದ್ದರು.