ಸೌತಾಂಪ್ಟನ್, ಆಗಸ್ಟ್ 26, 2020 (www.justkannada.in): ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಟೆಸ್ಟ್ ಕ್ರಿಕೆಟಿನಲ್ಲಿ 600 ವಿಕೆಟ್ ಕಬಳಿಸಿದ ಮೊದಲ ವೇಗಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಪಾಕಿಸ್ತಾನ ವಿರುದ್ಧ ಇಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ನಲ್ಲಿ ಪಾಕಿಸ್ತಾನದ ನಾಯಕ ಅಜರ್ ಅಲಿ ವಿಕೆಟ್ ಉರುಳಿಸಿದ ಆಂಡರ್ಸನ್ ಈ ಸಾಧನೆ ಮಾಡಿದರು.
ಆಂಡರ್ಸನ್ 156ನೇ ಪಂದ್ಯದಲ್ಲಿ ಈ ಸಾಧನೆ ಮಾಡಿರುವರು. 2003ರಲ್ಲಿ ಟೆಸ್ಟ್ ಕ್ರಿಕೆಟಿಗೆ ಪಾದಾರ್ಪಣೆ ಮಾಡಿದ್ದ ಆಂಡರ್ಸನ್ ತನ್ನ ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ್ದರು.
ಶ್ರೀಲಂಕಾದ ಮಾಜಿ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್(133 ಪಂದ್ಯಗಳಲ್ಲಿ 800 ವಿಕೆಟ್ ), ಆಸ್ಟ್ರೇಲಿಯಾದ ಶೇನ್ ವಾರ್ನ್ 145 ಪಂದ್ಯಗಳಲ್ಲಿ 708 ವಿಕೆಟ್ ಮತ್ತು ಭಾರತದ ಅನಿಲ್ ಕುಂಬ್ಳೆ 132 ಪಂದ್ಯಗಳಲ್ಲಿ 619 ವಿಕೆಟ್ ಪಡೆದು ಮೊದಲ ಮೂರು ಸ್ಥಾನದಲ್ಲಿದ್ದಾರೆ.