ಮೈಸೂರು, ಜುಲೈ 04, 2021 (www.justkannada.in): ಕೊರೊನಾ, ಲಾಕ್ ಡೌನ್ ಹಿನ್ನೆಲೆಯಲ್ಇ ಏಪ್ರಿಲ್ 24 ರಿಂದ ವಿಶ್ವ ವಿಖ್ಯಾತ ಮೈಸೂರು ಅರಮನೆ ಪ್ರವೇಶವನ್ನು ಪ್ರವಾಸಿಗರಿಗೆ ನಿರ್ಭಂಧಿಸಲಾಗಿತ್ತು. ಮೈಸೂರು ಅರಮನೆಯ ವೀಕ್ಷಣೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಅವಕಾಶ ನೀಡಲಾಗಿದೆ.
ಅರಮನೆಯ ವೆಬ್ಸೈಟ್ www.mysorepalace.gov.in ನಲ್ಲಿ ಆನ್ಲೈನ್ ಮೂಲಕ ಟಿಕೆಟ್ ಖರೀದಿಗೆ ಅವಕಾಶ . ಅರಮನೆಯ ವರಾಹ ದ್ವಾರಗಳಲ್ಲಿರುವ ಟಿಕೆಟ್ ಕೌಂಟರ್ನಲ್ಲಿಯೂ ಸಹ ಟಿಕೆಟ್ ದೊರೆಯಲಿದೆ.
ಪ್ರವಾಸಿಗರಿಗೆ ಅರಮನೆಯ ಪ್ರವೇಶ ದ್ವಾರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ. ಅರಮನೆಯ ಪ್ರವೇಶ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ. ಟಿಕೆಟ್ ಕೌಂಟರ್ನಲ್ಲಿ ಪ್ರವಾಸಿಗರ ನಡುವೆ ಅಂತರ ಕಾಯ್ದುಕೊಳ್ಳಲು ಚೌಕಾಕಾರದ ಗುರುತು. ಹಾಕಲಾಗಿದೆ.
ಪ್ರವಾಸಿಗರು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ತಪ್ಪದೇ ಧರಿಸಬೇಕು. ಪ್ರವಾಸಿಗರ ಮೇಲೆ ಸಿಸಿಟಿವಿ ಕಾವಲು. ಅರಮನೆಯ ಆವರಣದಲ್ಲಿ ಸೂಚನಾ ಫಲಕಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ ಎಂದು ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕ ಟಿ ಎಸ್ ಸುಬ್ರಹ್ಮಣ್ಯ ಮಾಹಿತಿ ನೀಡಿದ್ದಾರೆ.
ಮೃಗಾಲಯ, ಕಾರಂಜಿ ಕೆರೆ: ಮೈಸೂರು ಮೃಗಾಲಯವೂ ಕಾರ್ಯಾರಂಭ ಕೂಡ ನಾಳೆಯಿಂದ ಕಾರ್ಯಾರಂಭ ಮಾಡಲಿದೆ.ಬೆಳಗ್ಗೆ 10ರಿಂದ 5ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಜತೆಗೆ ಕಾರಂಜಿ ಕೆರೆಗೆ ಪ್ರವಾಸಿಗರ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಶ್ರೀ ಚಾಮರಾಜೇಂದ್ರ ಮೃಗಾಲಯದ ಕಾರ್ಯ ನಿರ್ವಹಕ ನಿರ್ದೇಶಕ ಅಜಿತ್ ಕುಲಕರ್ಣಿ ತಿಳಿಸಿದ್ದಾರೆ.