ಬೆಂಗಳೂರು, ಜೂನ್ 04, 2023 (www.justkannada.in): ಕೇರಳಕ್ಕೆ ಮುಂಗಾರು ಮಾರುತ ಪ್ರವೇಶ ಕೆಲ ದಿನಗಳ ಕಾಲ ವಿಳಂಬವಾಗುವ ಸಾಧ್ಯತೆ ಇದೆ.
ಕೇರಳಕ್ಕೆ ಮುಂಗಾರು ಪ್ರವೇಶ ತಡವಾಗಲಿದ್ದು, ಜೊತೆಗೆ ಮುಂದಿನ 5 ದಿನಗಳವರೆಗೆ ಪೂರ್ವ ಭಾರತದಲ್ಲಿ ಬಿಸಿಗಾಳಿ ಮುಂದುವರೆಯಲಿದೆ.
ಈ ಕುರಿತು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಿಂದೂ ಮಹಾಸಾಗರದಲ್ಲಿ ಉಂಟಾದ ಫ್ಯಾಬಿಯನ್ ಚಂಡಮಾರುತ ಮಾನ್ಸೂನ್ ಮಾರುತಗಳನ್ನು ಸೆಳೆದಿದೆ. ಹೀಗಾಗಿ ಮುಂಗಾರು ಕೇರಳ ಪ್ರವೇಶ ತಡವಾಗಲಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಜೂನ್ 6 ರಿಂದ 8 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೈಸೂರು, ಮಂಡ್ಯ. ಕೋಲಾರ. ರಾಮನಗರ., ಚಿಕ್ಕಬಳ್ಳಾಪುರ, ಹಾಸನ, ಬೆಂಗಳೂರು. ಬೆಂಗಳೂರು ಗ್ರಾಮಾಂತರ. ಚಾಮರಾಜನಗರ. ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.