ಬೆಂಗಳೂರು, ಜೂನ್ 06, 2020 (www.justkannada.in): ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘ ಸ್ಥಾಪನೆಗೆ ಕ್ರಮ ವಹಿಸುವಂತೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ವೈರಸ್ ಹರಡುತ್ತಿರುವ ಈ ಸಂದರ್ಭದಲ್ಲಿರಾಜ್ಯದಲ್ಲಿನ ಆಶಾ ಕಾರ್ಯಕರ್ತೆಯರು ಪರಿಣಾಮಕಾರಿಯಾಗಿಕಾರ್ಯನಿರ್ವಹಿಸುತ್ತಿದ್ದಾರೆ. ಇದನ್ನು ಮನಗಂಡು ಸನ್ಮಾನ್ಯ ಮುಖ್ಯಮಂತ್ರಿಯವರು ಆಶಾ ಕಾರ್ಯಕರ್ತೆಯವರಿಗೆ ಪ್ರೋತ್ಸಾಹ ನೀಡಿ, ನೈತಿಕಆತ್ಮಸ್ಥೈರ್ಯತುಂಬಲು ಆರ್ಥಿಕವಾಗಿ ಪ್ರೋತ್ಸಾಹಧನಘೋಷಣೆ ಮಾಡಿರುತ್ತಾರೆ.
ಅದರಂತೆ ಸಹಕಾರಸಂಘಗಳ ವತಿಯಿಂದರಾಜ್ಯದಲ್ಲಿನ ಪ್ರತಿ ಆಶಾ ಕಾರ್ಯಕರ್ತೆಯರಿಗೆತಲಾರೂ. ೩,೦೦೦/-ರಂತೆ ಪ್ರೋತ್ಸಾಹಧನ ನೀಡಲುಕ್ರಮಕೈಗೊಳ್ಳಲಾಗಿದೆ. ಜತೆಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ೪೦,೦೦೦ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರನ್ನು ಗುರುತಿಸಿ, ಅವರಿಗೆ ನೈತಿಕವಾಗಿಆತ್ಮಸ್ಥೈರ್ಯತುಂಬಲು ಹಾಗೂ ಆರ್ಥಿಕ ಸದೃಢತೆ ಹೊಂದಲುರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಬೇಕು.
ಆಯಾ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ, ಈ ಬಗ್ಗೆ ಅರಿವು ಮೂಡಿಸಿ, ಅವರುಗಳಿಗೆ ಆರ್ಥಿಕವಾಗಿ ಸಬಲತೆ ಹೊಂದಲು, ಪ್ರತಿಜಿಲ್ಲೆಯಲ್ಲಿಯೂ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಲು ಸಂಬಂಧಪಟ್ಟ ಪ್ರಾಂತೀಯಜಂಟಿ ನಿಬಂಧಕರು, ಉಪನಿಬಂಧಕರು ಹಾಗೂ ಸಹಾಯಕ ನಿಬಂಧಕರುಗಳಿಗೆ ನಿರ್ದೇಶನ ನೀಡಿ, ಅಗತ್ಯ ಕ್ರಮಕೈಗೊಳ್ಳುವಂತೆ ಹಾಗೂ ಕೈಗೊಂಡಕ್ರಮದ ಬಗ್ಗೆ ೧೫ ದಿನಗಳೊಳಗಾಗಿ ಈ ಕಛೇರಿಗೆ ವರದಿ ನೀಡಲು ಸಚಿವರು ನಿರ್ದೇಶನ ನೀಡಿದ್ದಾರೆ.