ಹಾಸನ ,ಸೆಪ್ಟಂಬರ್,6,2024 (www.justkannada.in): ಎತ್ತಿನಹೊಳೆ ಯೋಜನೆ 2026-27ರ ವೇಳೆಗೆ ಪೂರ್ಣಗೊಳ್ಳುವುದು ನಿಶ್ಚಿತ. ಇದರಲ್ಲಿ ಯಾವುದೇ ಸಂಶಯ, ಅನುಮಾನ ಬೇಡ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಎತ್ತಿನಹೊಳೆ ಯೋಜನೆ ಮೊದಲ ಹಂತಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2014ರಲ್ಲಿ ಎತ್ತಿನಹೊಳೆ ಯೋಜನೆಗೆ ನಾನೇ ಭೂಮಿ ಪೂಜೆ ನೆರವೇರಿಸಿದ್ದೆ. ಇಂದು ನಾನೇ ಉದ್ಘಾಟನೆ ಮಾಡುತ್ತಿದ್ದೇನೆ. ಬಹಳ ಸಂತೋಷವಾಗುತ್ತಿದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಹಾಸನ, ರಾಮನಗರ, ಚಿಕ್ಕಮಗಳೂರು ಜಿಲ್ಲೆಯ ಜನರ ಬಹುದಿನದ ಬೇಡಿಕೆ. ಎತ್ತಿನಹೊಳೆ ಯೋಜನೆ ಆಗಬೇಕೆಂಬ ಆಪೇಕ್ಷಿ ಇತ್ತು. ಎತ್ತಿನಹೊಳೆ ಯೋಜನೆ ಪೂರ್ಣವಾಗಲಿದೆ ಯಾವುದೇ ಸಂಶಯ. ಅನುಮಾನ ಬೇಡ ಎಂದರು.
ಲಕ್ಷಾಂತರ ಫಲಾನುಭವಿಗಳ ಯೋಜನೆಯ ಅನುಕೂಲ ತಲುಪಲಿದೆ. 7 ಜಿಲ್ಲೆಗಳ ಜನತೆಯ ಮನಗೆ ಕುಡಿಯುವ ನೀರು ತಲುಪುತ್ತದೆ. ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆ. ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಈ ವೇಳೆ ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್, ಶಾಸಕರು, ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Key words: Ettinhole project, certain, complete, CM Siddaramaiah