ಬೆಂಗಳೂರು, ಸೆಪ್ಟೆಂಬರ್ 03, 2023 (www.justkannada.in): ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ತೀವ್ರ ಜ್ವರದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದೆ.
ಮನೆಗೆ ಹೋದ ಬಳಿಕ ಹೆಚ್ಚು ಆಯಾಸ ಮಾಡಿಕೊಳ್ಳಬಾರದು, ಪ್ರವಾಸ ಮಾಡಬಾರದು , ಸಂಪೂರ್ಣ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಿ ನಂತರ ವೈದ್ಯರು ವಾರ್ಡ್ ಗೆ ಶಿಫ್ಟ್ ಮಾಡಿದ್ದರು.