ಬೆಂಗಳೂರು: ಜಾತಿ ವಿಭಜಕ ಎಂದು ತಮ್ಮ ವಿರುದ್ಧ ಟ್ವೀಟ್ ಮಾಡಿರುವ ಬಿಜೆಪಿ ಪಕ್ಷಕ್ಕೆ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ನೀಡಿರುವ ಟಾಂಗ್ ನೀಡಿದ್ದಾರೆ.
ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಕೂಡ ಸರಣಿ ಟ್ವೀಟ್ ಮೂಲಕ ಪ್ರತ್ಯುತ್ತರ ನೀಡಿದ್ದಾರೆ.
ಹೀಗಿದೆ ಸಿದ್ದರಾಮಯ್ಯ ಟ್ವೀಟ್ ಟಾಂಗ್…
’ಬಾಯಲ್ಲಿ ನಾವೆಲ್ಲ ಒಂದು, ನಾವೆಲ್ಲ ಹಿಂದು’ ಎನ್ನುವ ಮಂತ್ರ.
ಅಂತರಂಗದಲ್ಲಿ ಜಾತಿಗಳನ್ನು ಒಡೆದು ಆಳುವ ಕುತಂತ್ರ.
ಮಂಡಲ ವಿರುದ್ಧ ಕಮಂಡಲ ಹಿಡಿದ ಬಿಜೆಪಿ ನಾಯಕರ ಜಾತಿ ಹಿಪಾಕ್ರಸಿಯನ್ನು ಬಿಚ್ಚಿಟ್ಟರೆ ಅದೊಂದು ಕೊನೆಯಿಲ್ಲದ ಧಾರವಾಹಿ ಆದೀತು.
ಕುರುಬ ಸಮಾವೇಶ ನಡೆಸಿದ್ದ ಈಶ್ವರಪ್ಪ, ಪಂಚಮಸಾಲಿ ಲಿಂಗಾಯತರ ಸಮಾವೇಶ ನಡೆಸಿದ ಯತ್ನಾಳ್, ಬ್ರಾಹ್ಮಣ ಸಮಾವೇಶದಲ್ಲಿ ಪಾಲ್ಗೊಂಡ ಜೋಷಿ, ಕಾಗೇರಿ, ಸುರೇಶ್ ಕುರ್ಮಾ, ಒಕ್ಕಲಿಗನೆಂಬ ಕಾರಣಕ್ಕೆ ಸಚಿವನಾದೆ ಎನ್ನುವ ರ್ಆ.ಅಶೋಕ್ ಜಾತಿವಾದಿಗಳಾ? ಜಾತ್ಯತೀತರಾ?
ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜಾತಿವಾದಿಯೇ? ಜಾತ್ಯತೀತವಾದಿಯೇ?
ಶೋಷಿತ ಜಾತಿಗಳ ಸಮಾವೇಶದಲ್ಲಿ ನಾನು ಭಾಗವಹಿಸಿದರೆ ಜಾತಿವಾದಿ, ನೀವು ಭಾಗವಹಿಸಿದರೆ ಜಾತ್ಯತೀತರಾ?
ಜಾತಿ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ ಎಂದು ಬಿಜೆಪಿ ನಾಯಕರು ಪ್ರಮಾಣ ಮಾಡಲಿ, ನಾನು ರಾಜಕೀಯದಿಂದ ನಿವೃತ್ತಿ ಆಗುತ್ತೇನೆ.
ಆತ್ಮವಂಚನೆ ಬಿಟ್ಟು ಪ್ರಾಮಾಣಿಕ ರಾಜಕೀಯ ಮಾಡಿ.
ಟಿಪ್ಪು ಸುಲ್ತಾನ್ ಜಯಂತಿಯಲ್ಲಿ ನಾನು ಭಾಗವಹಿಸಿದರೆ
ಹಿಂದೂ ವಿರೋಧಿ.
ಟಿಪ್ಪು ಬಗ್ಗೆ ಸರ್ಕಾರದಿಂದಲೇ ಪುಸ್ತಕ ಪ್ರಕಟಿಸಿ ಹಾಡಿ ಹೊಗಳಿದ ಮಾಜಿಮುಖ್ಯಮಂತ್ರಿ ಜಗದೀಶ್ ಶೆರ್ಟ್ಟ, ಮುಸ್ಲಿಂ ಗಣವೇಷ ಹಾಕಿ ಖಡ್ಗ ಹಿಡಿದು ಕುಣಿದ ಬಿ.ಎಸ್ ಯಡಿಯೂರಪ್ಪ, ರ್ಆ. ಅಶೋಕ್ ಹಿಂದುಕುಲ ತಿಲಕರೇ?
ಜಾತಿ ನಾಶವಾಗುವ ವರೆಗೆ ಮೀಸಲಾತಿ ಇರಬೇಕೆಂಬ ನನ್ನ ಮಾತಿಗೆ ನಾನೀಗಲೂ ಬದ್ಧ.
ಮಂಡಲ್ ವರದಿ ವಿರೋಧಿಸಿ ಮೈಗೆ ಬೆಂಕಿ ಹಚ್ಚಿಕೊಂಡಿದ್ದ ಬಿಜೆಪಿ ನಾಯಕರೇ ಈಗ ನಿಮಗೆ ಮೀಸಲಾತಿ ವಿರೋಧಿಸುವ ತಾಕತ್ ಇದೆಯೇ?
ಅಂದ ಹಾಗೆ ಬಿಜೆಪಿ ನಾಯಕರೇ,
ನಿಮ್ಮ ಮಾತೃ ಸಂಸ್ಥೆಯಾದ ರ್ಆ ಎಸ್ ಎಸ್ ಗೆ ಚುನಾವಣೆ ಇಲ್ಲದೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದು ಜಾತಿಯವರೇ ಯಾಕೆ?
ಚುನಾವಣೆಯಲ್ಲಿ ಆಯ್ಕೆಯಾಗುವ ಬಿಜೆಪಿ ಅಭ್ಯರ್ಥಿಗಳಲ್ಲಿ ಎಲ್ಲ ಜಾತಿಗಳಿಗೆ ಸೇರಿದವರು ಇರುವುದು ಯಾಕೆ?