ಬೆಂಗಳೂರು,ಏಪ್ರಿಲ್,28,2025 (www.justkannada.in): ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ಧರಿಸಿದಂತೆ ವಿಧಿಸಿದ್ದ ನಿರ್ಬಂಧದ ಆದೇಶವನ್ನ ರೈಲ್ವೆಇಲಾಖೆ ವಾಪಸ್ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ರೈಲ್ವೆ ಸಚಿವಾಲಯ ಇದೀಗ ಆದೇಶ ಹೊರಡಿಸಿದೆ. ನೇಮಕಾತಿ ಮಂಡಳಿಗಳಿಗೆ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ. ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ಧರಿಸಲು ನಿರ್ಬಂಧಿಸಿದ ಬಳಿಕ ಭಾರಿ ವಿವಾದ ಉಂಟಾಗಿತ್ತು. ನಂತರ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಅವರು ಮಂಗಳಸೂತ್ರ, ಜನಿವಾರ ನಿರ್ಬಂಧದ ಆದೇಶ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಇದೀಗ ಕೇಂದ್ರ ಸಚಿವ ವಿ.ಸೋಮಣ್ಣ ಸೂಚನೆ ಬೆನ್ನಲ್ಲೆ ರೈಲ್ವೆ ನಿರ್ಬಂಧ ವಾಪಸ್ ಪಡೆದುಕೊಳ್ಳಲಾಗಿದೆ. ಈ ಕುರಿತು ಸಚಿವ ವಿ. ಸೋಮಣ್ಣ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 28, 29 ಮತ್ತು 30 ಏಪ್ರಿಲ್ 2025ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ.
ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ನನಗೆ ಬಂದಿದೆ. ಈ ಬಗ್ಗೆ, ಸಂಸದರು, ಶಾಸಕರು ಇದನ್ನು ಸರಿಪಡಿಸುವಂತೆ ಮನವಿ ಮಾಡಿರುತ್ತಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ನನ್ನ ಗಮನವನ್ನು ಸೆಳೆದಿರುತ್ತಾರೆ.
ಈ ವಿಷಯದ ಬಗ್ಗೆ ಇಂದು ನಾನು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲ ನಿವಾರಿಸಲಾಗಿದೆ. ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ.
ಇತರ ಎಲ್ಲಾ ಪರೀಕ್ಷಾ ನಿಯಮವನ್ನು ಪಾಲಿಸಿ, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚಿಸಲಾಗಿದೆ. ಪರೀಕ್ಷಾ ಅಭ್ಯರ್ಥಿಗಳು ಸಹ ನಿಯಮಾನುಸಾರ ಪರೀಕ್ಷೆ ಬರೆಯುವಂತೆ ಮನವಿ ಮಾಡುತ್ತೇನೆ. ಅಭ್ಯರ್ಥಿಗಳು ಗೊಂದಲಕ್ಕೀಡಾಗಬಾರದೆಂದು ಮನವಿ ಮಾಡಿದ್ದಾರೆ.
Key words: Railway Department, withdraws, order, banning, Mangalsutra, Janivara , exams