ಭೂ ಕುಸಿತ: ತಜ್ಞರ ಸಮಿತಿಯಿಂದ ಸಿಎಂ ಬಿಎಸ್ ವೈಗೆ ಅಂತಿಮ ವರದಿ ಸಲ್ಲಿಕೆ….

ಬೆಂಗಳೂರು, ಏಪ್ರಿಲ್, 1,2021(www.justkannada.in):  ಕಳೆದ ಮೂರು ವರ್ಷಗಳಲ್ಲಿ ಮಲೆನಾಡಿನಲ್ಲಿ ಭೂ-ಕುಸಿತದಿಂದ ವ್ಯಾಪಕವಾಗಿ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷರಾದ ಅನಂತ ಹೆಗಡೆ ಅಶೀಸರ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ನೇಮಕ ಮಾಡಿದ್ದ ತಜ್ಞರ ಸಮಿತಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿತು.Illegally,Sand,carrying,Truck,Seized,arrest,driver

ವರದಿ ಸ್ವೀಕರಿಸಿದ ನಂತರ ಮಾತನಾಡಿದ  ಸಿಎಂ ಬಿಎಸ್ ಯಡಿಯೂರಪ್ಪ, ಸಮಿತಿಯು ಇಂದು ತನ್ನ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಿದೆ. ವರದಿಯಲ್ಲಿ ಕರಾವಳಿಯ ನೈಸರ್ಗಿಕ ಸಂಪತ್ತು, ಮಲೆನಾಡಿನ ನದಿ-ಕಣಿವೆಗಳ ಉಳಿವಿಗೆ ಪೂರಕವಾದ ಮತ್ತು ಭೂ-ಕುಸಿತವನ್ನು ತಡೆಗಟ್ಟಲು ಹಲವು ವೈಜ್ಞಾನಿಕ ಸಲಹೆಗಳನ್ನು, ಮಹತ್ವದ ಪರಿಹಾರೋಪಾಯಗಳನ್ನು  ಹಾಗೂ ನಿಯಂತ್ರಣ  ಕ್ರಮಗಳ ಬಗ್ಗೆ ತಿಳಿಸಲಾಗಿದೆ ಎಂದರು.

ಭಾರಿ ಭೂ-ಕುಸಿತ ಪ್ರಕರಣಗಳನ್ನು ನೈಸರ್ಗಿಕ ವಿಪತ್ತು ವ್ಯಾಖ್ಯೆ ಅಡಿ ತರಬೇಕು. ಭೂ-ಕುಸಿತ ನಿಯಂತ್ರಣ ಮಾರ್ಗೋಪಾಯಗಳ ಬಗ್ಗೆ ಕ್ರಿಯಾಯೋಜನೆ ರೂಪಿಸಿ, ಭೂ-ಕುಸಿತ ಸಾಧ್ಯತೆ ಇರುವ ಪ್ರದೇಶಗಳ ನಕ್ಷೆ ರಚಿಸಬೇಕು ಎಂಬ ಸಲಹೆಗಳ ಜೊತೆಗೆ ಭೂ-ಕುಸಿತದಿಂದ ಉಂಟಾಗಿರುವ ಆಸ್ತಿ ಹಾನಿ ಮತ್ತು ಪ್ರಾಣ ಹಾನಿಗೆ ಪರಿಹಾರ ಮತ್ತು ಪುನರ್ವಸತಿ ಬಗ್ಗೆ ಸೂಕ್ತ ಸಲಹೆಗಳು ಸಹ ವರದಿಯಲ್ಲಿ ಮೂಡಿಬಂದಿವೆ ಎಂದು  ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.Expert Committee - Landslides -Submits -Final Report

ಕೇಂದ್ರ ಸರ್ಕಾರದ ಜಿ.ಎಸ್.ಐ ಲ್ಯಾಂಡ್ ಸ್ಲಿಪ್ ಯೋಜನೆಯಲ್ಲಿ ರಾಜ್ಯವನ್ನು ಸೇರ್ಪಡೆಗೊಳಿಸಲು ಮನವಿಯನ್ನು ಮಾಡಲಾಗುವುದು. ಕೇಂದ್ರ ಸರ್ಕಾರ ನೀಡುವ ಮಿಟಿಗೇಷನ್ ಫಂಡ್ ಮೂಲಕ ಭೂ ಕುಸಿತ ಪ್ರದೇಶದ ಪುನರ್ ನಿರ್ಮಾಣಕ್ಕೆ  ರಾಜ್ಯ  ಸರ್ಕಾರ  ಅನುದಾನವನ್ನೂ ಮೀಸಲಿಡುವ  ಬಗ್ಗೆ ಸರ್ಕಾರ ಪರಿಶೀಲಿಸುವುದು ಹಾಗೂ ವರದಿಯಲ್ಲಿ ಮಾಡಲಾಗಿರುವ ಶಿಫಾರಸ್ಸುಗಳ ಅನುಷ್ಠಾನಕ್ಕೆ ಸರ್ಕಾರ ಪರಿಶೀಲಿಸಿ ಕ್ರಮಕೈಗೊಳ್ಳಲಿದೆ ಎಂದು ಸಿಎಂ ಬಿಎಸ್ ವೈ ತಿಳಿಸಿದರು.

ಕರ್ನಾಟಕ ಜೀವವೈವಿಧ್ಯ  ಮಂಡಳಿ ಅಧ್ಯಕ್ಷರಾದ ಅನಂತ ಹೆಗಡೆ ಅಶೀಸರ ಹಾಗೂ ಸಮಿತಿಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ENGLISH SUMMARY…

Expert Committee on Landslides Submits Final Report

Bengaluru,April 01: The expert committee appointed to study landslide hit regions submitted it’s final report to Chief Minister B.S.Yediyurappa here today.

Speaking on the occasion the Chief Minister said that The Government of Karnataka had constituted an expert committee headed by Sri Ananth Hegde Ashisara, chairman, Karnataka Biodiversity Board to study the landslides hit places in Western Ghats.

The Committee has submitted its report today after conducting a detailed study on landslide hit areas.

The Committee has provided guidelines for the protection of rivers and valleys in the vulnerable areas of Western Ghats and the coastal region. It has also given several significant scientific suggestions and relief measures for the prevention of landslides, he said.

The committee has made numerous recommendations for the prevention of landslides, relief measures and reconstruction.

KSNDMC has identified 23 taluks in the State which are prone to landslides, he said.

The committee has recommended to strengthen the District Level Diaster Management Committee.
It has also recommended to prepare an action plan pertaining to prevention of landslides.

The Government of Karnataka will examine the recommendations and take necessary steps, the CM said.

Ananth Hegde Ashishara, chairman of the expert committee and Karnataka Biodiversity Board and members of the committee were present.

Key words: Expert Committee – Landslides -Submits -Final Report