ಮೈಸೂರು,ಫೆ,15,2020(www.justkannada.in): ಮೈಸೂರಿನ ಪ್ರತಿಷ್ಠಿತ ಪಾರಂಪರಿಕ ಕಟ್ಟಡ ದೇವರಾಜ ಮಾರುಕಟ್ಟೆಯನ್ನ ಕೆಡವಲು ಮೈಸೂರು ಮಹಾನಗರ ಪಾಲಿಕೆ ತೀರ್ಮಾನ ತೆಗೆದುಕೊಂಡಿರುವುದಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ,
ದೇವರಾಜ ಮಾರುಕಟ್ಟೆ ಕೆಡವಬೇಕೆಂದು ತಜ್ಞರ ಸಮಿತಿ ನೀಡಿರುವ ವರದಿ ಅವೈಜ್ಞಾನಿಕವಾಗಿದೆ. ಮೈಸೂರಿನ ಮೇಯರ್ ಮತ್ತು ಪಾಲಿಕೆ ಆಯುಕ್ತರಿಗೂ ಈ ಬಗ್ಗೆ ಸರಿಯಾದ ಜ್ಞಾನವಿಲ್ಲ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ , ದೇವರಾಜ ಮಾರುಕಟ್ಟೆ ಪಾರಂಪರಿಕ ಕಟ್ಟಡವಾಗಿದೆ. ಅದನ್ನು ಹಾಗೆಯೇ ಉಳಿಸಿಕೊಳ್ಳಬೇಕು. ದೇವರಾಜ ಮಾರುಕಟ್ಟೆಯನ್ನು ಸುಣ್ಣಗಾರೆ ಬಳಸಿ ನಿರ್ಮಾಣ ಮಾಡಲಾಗಿದೆ. ದೇವರಾಜ ಮಾರುಕಟ್ಟೆಯ ವಾಸ್ತವ ಸ್ಥಿತಿ ಪರಿಶೀಲಿಸಲು ನೇಮಿಸಿದ್ದ ತಜ್ಞರ ಸಮಿತಿಯಲ್ಲಿ ಪ್ರೊಫೆಸರ್ ರಂಗರಾಜು ಅವರನ್ನು ಹೊರತುಪಡಿಸಿದರೆ ಬೇರೆ ಯಾರೂ ನುರಿತ ಪಾರಂಪರಿಕ ತಜ್ಞರು ಇರಲಿಲ್ಲ. ಹಾಗಾಗಿ ದೇವರಾಜ ಮಾರುಕಟ್ಟೆ ಕೆಡವಬೇಕೆಂದು ತಜ್ಞರ ಸಮಿತಿ ನೀಡಿರುವ ವರದಿ ಅವೈಜ್ಞಾನಿಕವಾಗಿದೆ. ಮೈಸೂರಿನ ಮೇಯರ್ ಮತ್ತು ಪಾಲಿಕೆ ಆಯುಕ್ತರಿಗೂ ಈ ಬಗ್ಗೆ ಸರಿಯಾದ ಜ್ಞಾನವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದೇವರಾಜ ಮಾರುಕಟ್ಟೆ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯಾಲಯ ಸಹ ಆದೇಶಿಸಿದೆ. ಹಾಗಾಗಿ ಮೈಸೂರು ಜಿಲ್ಲಾಡಳಿತ ದೇವರಾಜ ಮಾರುಕಟ್ಟೆ ಉಳಿಸಲು ಸೂಕ್ತ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
Key words: Expert – Report – Devaraja Market -mayor –corporation-commissioner –proper knowledge – Yaduveer