ಬೆಂಗಳೂರು,ಜೂನ್,3,2021(www.justkannada.in): ಗ್ರಾಮೀಣ ಭಾಗದಲ್ಲಿ ಕೊರೋನಾ ಇನ್ನು ಕಡಿಮೆಯಾಗಿಲ್ಲ. ರಾಜ್ಯದಲ್ಲಿ ಇನ್ನೂ ಒಂದುವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಲಿ. ಸಂಕಷ್ಟದಲ್ಲಿರುವ ಜನರಿಗೆ 10 ಸಾವಿರೂ ಪರಿಹಾರ ಘೋಷಿಸಲಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕೋವಿಡ್ ಸೋಂಕು, ಬೆಂಗಳೂರಿನಲ್ಲಿ ಸ್ವಲ್ಪ ಇಳಿಕೆಯಾಗಿದ್ದರೂ ಗ್ರಾಮೀಣ ಭಾಗದಲ್ಲಿ ಸೋಂಕು ಹರಡುವಿಕೆ ಪ್ರಮಾಣ ತಗ್ಗಿಲ್ಲ. ಹೀಗಾಗಿ ಜನರ ಆರೋಗ್ಯದ ಹಿತದೃಷ್ಠಿಯಿಂದ ಲಾಕ್ ಡೌನ್ ಮುಂದುವರೆಸುವುದು ಸೂಕ್ತ. .ಲಾಕ್ ಡೌನ್ ವಿಸ್ತರಣೆಗೆ ತಜ್ಞರೂ ಸಲಹೆ ನೀಡಿದ್ದಾರೆ. ಹೀಗಾಗಿ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.
ಕೊರೋನಾ ಸೋಂಕಿನ ಮೊದಲ ಅಲೆಯ ಕಳೆದ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸರ್ಕಾರದ ಆದಾಯ ತೆರಿಗೆ ಕುಗ್ಗಿತ್ತು. ಆದರೆ ಈ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸರ್ಕಾರಕ್ಕೆ ತೆರಿಗೆ ಹೆಚ್ಚು ಬಂದಿದೆ. ಅಬಕಾರಿ ಇಲಾಖೆಯಲ್ಲಿ ಕಳದ ಬಾರಿಗಿಂತ ಹೆಚ್ಚು ಆದಾಯ ಬಂದಿದೆ. ಹೀಗಾಗಿ ಆರ್ಥಿಕ ಹೊರೆಯಾಗುವುದೇ ಇಲ್ಲ. ಅದ್ದರಿಂದ ಸಂಕಷ್ಟದಲ್ಲಿರುವವರಿಗೆ 10 ಸಾವಿರ ರೂ. ಪರಿಹಾರ ಘೋಷಣೆ ಮಾಡಿ ಎಂದು ಹೆಚ್.ಡಿಕೆ ಒತ್ತಾಯಿಸಿದ್ದಾರೆ.
Key words: Extend-Lockdown- declare – compensation-former CM-H. D. Kumaraswamy