ಬೆಂಗಳೂರು,ಆಗಸ್ಟ್,7,2023(www.justkannada.in): ತಮ್ಮ ವಿರುದ್ಧ ಲಂಚಕ್ಕೆ ಬೇಡಿಕೆ ಆರೋಪ ಮಾಡಿ ರಾಜ್ಯಪಾಲರಿಗೆ ಸಹಾಯಕ ಕೃಷಿ ಅಧಿಕಾರಿಗಳು ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕೃಷಿ ಅಧಿಕಾರಿಗಳಿಂದ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ ನನಗೆ ಗೊತ್ತಿಲ್ಲ. ಕೃಷಿ ಜಂಟಿ ನಿರ್ದೇಶಕರ ಜತೆ ಈಗಷ್ಟೇ ಮಾತನಾಡಿದ್ದೇನೆ. ಇದೊಂದು ಫೇಕ್ ಲೆಟರ್ ಎಂಬ ಮಾಹಿತಿ ನೀಡಿದ್ದಾರೆ.
ಪಾಪ ಬಹಳ ಹುಡುಕಿ ಹುಡುಕಿ ಏನೇನೋ ಮಾಡುತ್ತಿದ್ದಾರೆ. ಹಾಗೇನಾದರೂ ಆಗಿದ್ದರೇ ತನಿಖೆ ನಡೆಸಲು ಸೂಚಿಸುತ್ತೇನೆ. ನಮ್ಮ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡುವೆ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
Key words: fake letter- suggest – investigate-Agriculture Minister -Chaluvarayaswamy