ಬೆಂಗಳೂರು,ಮಾರ್ಚ್,3,2021(www.justkannada.in): ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ಸ್ಪೋಟಗೊಂಡಿದ್ದು, ರಾಜ್ಯ ಬಿಜೆಪಿ ಸರ್ಕಾರ ಮುಜುಗರಕ್ಕೀಡಾಗಿದೆ. ಈ ಮಧ್ಯೆ ಅಣ್ಣ ರಮೇಶ್ ಜಾರಕಿಹೊಳಿ ಪರ ತಮ್ಮ ಬಾಲಚಂದ್ರ ಜಾರಕಿಹೊಳಿ ಬ್ಯಾಟ್ ಬೀಸಿದ್ದಾರೆ.
ಇಂದು ಸಿಎಂ ಬಿಎಸ್ ವೈ ಭೇಟಿಯಾದ ಬಳಿಕ ಮಾಧ್ಯಮಗಳ ಜತೆ ಮಾತನಾಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ, ಇದೊಂದು ಸೃಷ್ಟಿ ಮಾಡಿರುವಂತಹ ನಕಲಿ ಸಿಡಿ ಆಗಿದೆ. ರಮೇಶ್ ಜಾರಕಿಹೊಳಿ ಅವರೊಂದಿಗೆ ನಾವೆಲ್ಲರೂ ಜೊತೆಗಿರುತ್ತೇವೆ. ಸಿಬಿಐ ತನಿಖೆಗೆ ನೀಡುವಂತೆ ಸಿಎಂಗೆ ಒತ್ತಾಯ ಮಾಡಲಾಗಿದೆ. ಈ ಬಗ್ಗೆ ಸಿಐಡಿ ಅಥವಾ ಸಿಬಿಐ ತನಿಖೆಯಾಗಬೇಕು. ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದರೇ ತಪ್ಪು ಒಪ್ಪಿಕೊಂಡಂತಾಗುತ್ತದೆ. ಹೀಗಾಗಿ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಅದು ನಕಲಿ ಸಿಡಿಯಾಗಿದ್ದು, ಯೂಟ್ಯೂಬ್ನಲ್ಲಿ ವಿಡಿಯೋ ಅಪ್ ಲೋಡ್ ಮಾಡಲಾಗಿದೆ. ಇದನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಸಿಎಂಗೆ ಮನವಿ ಮಾಡಲಾಗಿದೆ. ಈ ಬಗ್ಗೆ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದರು.
ಇನ್ನು ನಕಲಿ ಸಿಡಿಗಾಗಿ ರಾಜೀನಾಮೆ ನೀಡಿದಲ್ಲಿ ಸಚಿವ ಸಂಪುಟವೇ ಖಾಲಿಯಾಗುತ್ತೆ. ಜಾರಕಿಹೊಳಿ ಕುಟುಂಬದ ವಿರುದ್ಧ ರಾಜಕೀಯ ಷಡ್ಯಂತ್ರ ರೂಪಿಸಲಾಗಿದೆ. ಇದರಲ್ಲಿ ಪ್ರಭಾವಿಗಳ ಕೈವಾಡವಿದೆ. ಇಂದು ಮಧ್ಯಾಹ್ನವೇ ರಮೇಶ್ ಜಾರಕಿಹೊಳಿ ಸಿಎಂ ಭೇಟಿಯಾಗಲಿದ್ದಾರೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
Key words: fake video- Ramesh jarakiholi – not resigned-MLA-Balachandra jarakiholi.