ಮೈಸೂರು,ಸೆಪ್ಟೆಂಬರ್,26,2020(www.justkannada.in) : ಮೈಸೂರಿನಲ್ಲಿ ನಕಲಿ ಯುನಿವರ್ಸಿಟಿ ಹೆಸರಲ್ಲಿ ಡಾಕ್ಟರೇಟ್ ದಂಧೆ ನಡೆಯುತ್ತಿದ್ದು, ಖಾಸಗಿ ಹೋಟೇಲ್ ನಲ್ಲಿ ನಡೆಯುತ್ತಿದ್ದ ನಕಲಿ ಡಾಕ್ಟರೇಟ್ ಪದವಿ ಪ್ರಧಾನ ಕಾರ್ಯಕ್ರಮದ ಮೇಲೆ ಡಿಸಿಪಿ ಪ್ರಕಾಶ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ನಿಖರ ಮಾಹಿತಿ ಮೇರೆಗೆ ಕಾರ್ಯಕ್ರಮದ ಸ್ಥಳದ ಮೇಲೆ ಡಿಸಿಪಿ ಪ್ರಕಾಶ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ೀ ಸಂದರ್ಭ ಪೊಲೀಸರ ಪ್ರವೇಶವಾಗುತ್ತಿದ್ದಂತೆ ಕಾರ್ಯಕ್ರಮ ಆಯೋಜಕರು ಕಾಲ್ಕಿತ್ತಿದ್ದು, ಮೂರಕ್ಕೂ ಹೆಚ್ಚು ಆಯೋಜಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಡಾಕ್ಟರೇಟ್ ಪದವಿ ನೀಡಲು ನಕಲಿ ಯುನಿವರ್ಸಿಟಿ ಮುಂದಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಹರಿಹರ ಶಾಸಕ ರಾಮಪ್ಪ ಭಾಗಿಯಾಗಿದ್ದರು. ಇಂಟರ್ನ್ಯಾಷನಲ್ ಗ್ಲೋಬಲ್ ಪೀಸ್ ಯುನಿವರ್ಸಿಟಿ ಹೆಸರಲ್ಲಿ ನಕಲಿ ಡಾಕ್ಟರೇಟ್ ಪದವಿ ಪ್ರಧಾನ ಮಾಡುತ್ತಿದ್ದು, ಕರ್ನಾಟಕ ಅಲ್ಲದೆ ದೇಶದ ಇತರ ಭಾಗಗಳಲ್ಲೂ ಡಾಕ್ಟರೇಟ್ ಹೆಸರಲ್ಲಿ ಪಂಗನಾಮ ಹಾಕಲು ನಕಲಿ ಯುನಿವರ್ಸಿಟಿ ಮುಂದಾಗಿತ್ತು ಎಂದು ತಿಳಿದು ಬಂದಿದೆ.
ಕಾರ್ಯಕ್ರಮದ ಪ್ರಶಸ್ತಿ ಪತ್ರ,ಮೂಮೆಂಟೋಗಳನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
key words : Fake-Doctorate-Master’s-Program-Attack-under- DCP Prakash Gowda