ಹೈದರಾಬಾದ್,ಜನವರಿಮ30,2023(www.justkannada.in): ಖ್ಯಾತ ಕವಿ, ವಿಮರ್ಶಕ ಕೆ.ವಿ ತಿರುಮಲೇಶ್ ಇಂದು ಮುಂಜಾನೆ ನಿಧನರಾಗಿದ್ದಾರೆ.
ಹೃದಯ ಕಾಯಿಲೆ ಹೊಂದಿದ್ದ ಕೆ.ವಿ ತಿರುಮಲೇಶ್ ಅವರಿಗೆ ಇತ್ತೀಚೆಗೆ ಹೃದಯದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಕಳೆದ ವಾರದವರೆಗೂ ಆಸ್ಪತ್ರೆಯಲ್ಲಿದ್ದ ಅವರು ನಿನ್ನೆ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದರು. ಅವರಿಗೆ ಪತ್ನಿ, ಮೂವರು ಹೆಣ್ಣುಮಕ್ಕಳಿದ್ದಾರೆ.
ಕವಿ-ಕತೆಗಾರ ಕೆ.ವಿ. ತಿರುಮಲೇಶ್ ಅವರು ಕನ್ನಡದ ಪ್ರಮುಖ ಬರಹಗಾರರಲ್ಲಿ ಒಬ್ಬರು. ಅಕ್ಷಯ ಕಾವ್ಯ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ತಿರುಮಲೇಶ್ ಅವರು ವಠಾರ ಸಂಕಲನದ ಮೂಲಕ ಕಾವ್ಯ ಕ್ಷೇತ್ರ ಪ್ರವೇಶಿಸಿದ್ದರು.
ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಎಂಬ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ಕೆ.ವಿ. ತಿರುಮಲೇಶ್ ಇವರು ಕನ್ನಡ ಭಾಷೆಯ ಬಹು ಮುಖ್ಯ ಕವಿ, ಕತೆಗಾರ, ಭಾಷಾ ವಿಜ್ಞಾನಿ, ವಿದ್ವಾಂಸ ಹಾಗೂ ವಿಮರ್ಶಕ. ಹೈದರಾಬಾದಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಆಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿದ್ದು ನಿವೃತ್ತಿ ಹೊಂದಿದ್ದರು.
Key words: Famous -poet – critic -KV Tirumalesh – no more.