ಬೆಂಗಳೂರು,ಆಗಸ್ಟ್,12,2022(www.justkannada.in): ಸುಗಮ ಸಂಗೀತ ಕ್ಷೇತ್ರದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಆರ್ಎಸ್ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ (ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ ‘ಕನ್ನಡ ಭಾವಗೀತೆಗಳಿಗೆ ಜೀವತುಂಬಿದ, ಕನ್ನಡದ ಮೊದಲ ರಜತ ಕಮಲ ಪ್ರಶಸ್ತಿಗೆ ಭಾಜನರಾದ ಅಪ್ರತಿಮ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಅಗಲಿಕೆ ಕನ್ನಡ ಕಲಾಕ್ಷೇತ್ರಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಹೇಳಿದ್ದಾರೆ.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮಾಡಿ. ‘ಸುಗಮ ಸಂಗೀತ ಲೋಕದ ಅನನ್ಯ ಪ್ರತಿಭೆ, ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ. ಕುವೆಂಪು, ಬೇಂದ್ರೆ ಸೇರಿ ಹೆಸರಾಂತ ಕವಿಗಳ ಗೀತೆಗಳಿಗೆ ಸ್ವರ ಕಟ್ಟಿದ ಸುಬ್ಬಣ್ಣ ಅವರ ಅಗಲಿಕೆ ನಾಡಿಗೆ ಬಹದೊಡ್ಡ ನಷ್ಟ. ಸುಬ್ಬಣ್ಣ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರು, ಅವರ ಸಂಗೀತ ಪರಿವಾರ ಹಾಗೂ ನಾಡಿನ ಜನತೆಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಂತಾಪ ಸೂಚಿಸಿದ್ದಾರೆ.
‘ಕನ್ನಡದ ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದಿಂದ ಸಂಗೀತ ಲೋಕ ಮತ್ತು ಕನ್ನಡಿಗರಾದ ನಾವೆಲ್ಲರೂ ಸಿರಿಕಂಠವೊಂದನ್ನು ಕಳೆದುಕೊಂಡಿದ್ದೇವೆ. ಸುಬ್ಬಣ್ಣ ಅವರು ಹಾಡುಗಳ ಮೂಲಕ ನಮ್ಮೊಳಗೆ ಸದಾ ಜೀವಂತವಾಗಿರುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖ ದಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಸಂತಾಪ ಸೂಚಿಸಿದ್ದಾರೆ.
Key words: famous singer -Shimoga Subbanna – death- CM bommai-Siddaramaiah – condoled