ಚೆನ್ನೈ,ಡಿಸೆಂಬರ್,28,2023(www.justkannada.in): ತಮಿಳಿನ ಖ್ಯಾತ ನಟ ಹಾಗೂ ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್(71) ಅವರು ಕೊರೊನಾದಿಂದ ನಿಧನ ಹೊಂದಿದ್ದಾರೆ.
ನಟ ವಿಜಯಕಾಂತ್ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನ್ಯುಮೋನಿಯಾದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಉಸಿರಾಟದ ಸಮಸ್ಯೆ ಎದುರಾಗಿದ್ದರಿಂದ ಐಸಿಯುನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ವಿಜಯಕಾಂತ್ ಅವರು 1952ರಲ್ಲಿ ಮದುರೈನಲ್ಲಿ ಜನಿಸಿದರು. ಅವರು 80ರ ದಶಕದಲ್ಲಿ ಸಿನಿಮಾ ರಂಗಕ್ಕೆ ಬಂದರು. 1979ರಲ್ಲಿ ತೆರೆಕಂಡ ಇನಿಕ್ಕುಮ್ ಇಳಮೈ ಸಿನಿಮಾದ ಮೂಲಕ ಅವರು ಸಿನಿಮಾರಂಗಕ್ಕೆ ಕಾಲಿಟ್ಟರು. ಬಳಿಕ 150ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.
ಇನ್ನು 2005ರಲ್ಲಿ ವಿಜಯಕಾಂತ್ ಅವರು ಡಿಎಂಡಿಕೆಯನ್ನು ಸ್ಥಾಪಿಸಿದರು. ಎರಡು ಬಾರಿ ವಿಧಾನಸಭಾ ಸದಸ್ಯರಾಗಿದ್ದರು. 2011ರಿಂದ 2016ರವರೆಗೆ ತಮಿಳುನಾಡು ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕನಾಗಿದ್ದರು.
Key words: Famous Tamil -actor -Vijayakanth -passed away -due – Corona.