ಸೆ.30ರೊಳಗೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ರೆ ವಿಧಾನಸೌಧಕ್ಕೆ ಮುತ್ತಿಗೆ- ಕುರುಬೂರು ಶಾಂತಕುಮಾರ್

ಬೆಂಗಳೂರು,ಸೆಪ್ಟಂಬರ್,9,2024 (www.justkannada.in):  ಸೆಪ್ಟೆಂಬರ್ 30ರ ಒಳಗೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ದರೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ  ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದರು.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುರುಬೂರು ಶಾಂತಕುಮಾರ್, ರಾಜ್ಯಾದ್ಯಂತ ಇರುವ ಜಲಾಶಯಗಳು ಹಾಗೂ ಕೆರೆಗಳ ಹುಳು ತೆಗೆಸಿ ರೈತರ ಜಮೀನಿಗೆ ಸರಬರಾಜು ಮಾಡಲು ಅವಶ್ಯ ಕ್ರಮ ಕೈಗೊಳ್ಳಬೇಕು. ತೆಲಂಗಾಣ ರಾಜ್ಯದ ಮಾದರಿಯಲ್ಲಿ ಕೃಷಿ ಪಂಪ್ ಸೆಟ್ ಗಳ ರೈತರು ಆಧಾರ್ ಲಿಂಕ್ ಮಾಡುತ್ತಿರುವ ವಿಚಾರ ಕೈ ಬಿಡಬೇಕು. ಕೃಷಿ ಪಂಪಶೆಟ್ ಗಳ ಅಕ್ರಮ ಸಕ್ರಮ ಯೋಜನೆ ಮರು ಜಾರಿಗೊಳಿಸಬೇಕು. ಭೂ ಸುಧಾರಣಾ ತಿದ್ದುಪಡಿ ಕಾಯ್ದೆರದ್ದು ಮಾಡಬೇಕು.  ರಾಜ್ಯ ಸರ್ಕಾರ ಭರವಸೆ ನೀಡಿದಂತೆ ಕೃಷಿ ಸಾಲ ಪಾವತಿಸದ ರೈತರ ಜಮೀನು ವಶಪಡಿಸಿಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದಿರುವುದನ್ನ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಬರ, ಅತಿವೃಷ್ಟಿ ಹಾನಿ,  ಪ್ರವಾಹ ಹಾನಿ, ಎನ್ ಡಿಆರ್ ಎಫ್ ಪರಿಹಾರ ಮಾನದಂಡ ತಿದ್ದುಪಡಿ ಮಾಡಿ ವೈಜ್ಞಾನಿಕ ಮಾನದಂಡ ಅನುಸರಿಸಿ ಪರಿಹಾರ ನೀಡುವಂತಾಗಬೇಕು. ಖಾಸಗಿ ಫೈನಾನ್ಸ್ ಗಳು ಬ್ಯಾಂಕುಗಳು ಸಾಲ ವಸೂಲಿಗೆ ನೋಟಿಸ್ ನೀಡಿ ಕಿರುಕುಳ ನೀಡಿ ಜಮೀನುಗಳನ್ನು ಹರಾಜು ಮಾಡುತ್ತಿರುವುದು ನಿಲ್ಲಿಸಬೇಕು. ರಾಜ್ಯ ಸರ್ಕಾರ ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು  ನೀಡಿರುವುದನ್ನು ಕೈ ಬಿಡಬೇಕು ಕಳಸಾ ಬಂಡೂರಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನೀಡಲು ಕೇಂದ್ರಕ್ಕೆ ಒತ್ತಾಯಿಸಿ  ಯೋಜನೆಗೆ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ಕಬ್ಬಿನ ಉತ್ಪನ್ನ ಇಳುವರಿ ಕಡಿಮೆ ತೋರುತ್ತಿರುವ  ಕಾರಣ ಪ್ರಸಕ್ತ ಸಾಲಿಗೆ ಎಫ್ ಆರ್ ಪಿ ದರಕ್ಕಿಂತ ಕಬ್ಬಿನ ಹೆಚ್ಚುವರಿ ದರ ನಿಗದಿ ಮಾಡಬೇಕು. ಹಿಂದಿನ ವರ್ಷ ನಿಗದಿ ಮಾಡಿದ ಟನ್ ಗೆ 150 ರೂ. ತಕ್ಷಣವೇ ಕೊಡಿಸಬೇಕು ಎಂಬ ಒತ್ತಾಯಗಳ ಬಗ್ಗೆ 25 ದಿನದ ಗಡುವಿನ ಒಳಗಾಗಿ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ರಾಜ್ಯದ ರೈತ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಸುತಿದ್ದೇವೆ ಎಂದು ನುಡಿದರು.

ಪತ್ರಿಕಾಗೋಷ್ಠಿಯಲ್ಲಿ  ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷರು ಕುರುಬೂರು ಶಾಂತಕುಮಾರ್,, ಮಹದಾಯಿ ನೀರು ಹೋರಾಟ ಸಮಿತಿ ರಾಜ್ಯಾಧ್ಯಕ್ಷ ವೀರೇಶ್ ಸೂಬರದ ಮಠ,  , ರಾಜ್ಯ ರೈತ ಸಂಘ ಪ್ರಧಾನ ಕಾರ್ಯದರ್ಶಿ  ಬಲ್ಲೂರು ರವಿಕುಮಾರ್,   ವೀರನಗೌಡ ಪಾಟೀಲ್, ಕರಿಬಸಪ್ಪಗೌಡ, ಹತ್ತಳ್ಳಿ ದೇವರಾಜ್, ಮಂಜೇಶ್ ಗೌಡ, ಬರಡನಫುರ ನಾಗರಾಜ್ , ಕೊಟ್ರೇಶ್ ಚೌದ್ರಿ ಯುವ ಮುಖಂಡರು ರೈತ ಸಂಘ ಜಗದೀಶ್.ಗುರುದೇವ ನಾರಾಯಣ ಉಪಸ್ಥಿತರಿದ್ದರು.

Key words: farmer,  problems, Vidhana Soudha,  Kuruburu Shanthakumar