ಹಾಸನ,ಫೆಬ್ರವರಿ,3,2025 (www.justkannada.in): ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವವರು ಹೆಚ್ಚುತ್ತಿದ್ದು ಇದೀಗ ಹಾಸನ ಜಿಲ್ಲೆಯಲ್ಲಿ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೊಣನೂರು ಹೋಬಳಿಯ ಕಂಟೇನಹಳ್ಳಿ ಗ್ರಾಮದ ರೈತ ರವಿ(50) ಆತ್ಮಹತ್ಯೆಗೆ ಶರಣಾದವರು. ರೈತ ರವಿ ವಿವಿಧ ಸಂಘಗಳಲ್ಲಿ ಸಾಲ ಮಾಡಿದ್ದರು. ಈ ಮಧ್ಯೆ ಸಾಲ ಮರುಪಾವತಿಸುವಂತೆ ಫೈನಾನ್ಸ್ ಗಳಿಂದ ಒತ್ತಡ ಬಂದಿದ್ದು ಜೊತೆಗೆ ಶುಂಠಿ ಬೆಲೆ ಕುಸಿತವಾಗಿದ್ದ ಹಿನ್ನೆಲೆಯಲ್ಲಿ ಮನನೊಂದು ರವಿ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಕೊಣನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರ ಸುಗ್ರೀವಾಜ್ಞೆಗೆ ಮುಂದಾದರೂ ಸಹ ಆತ್ಮಹತ್ಯೆಗಳ ಸರಣಿ ಮುಂದುವರೆದಿದೆ.
Key words: Microfinance, harassment, Farmer, commits suicide