ಬೆಂಗಳೂರು,ಸೆಪ್ಟಂಬರ್,24,2020(www.justkannada.in): ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ವಿಧಾನಸೌಧದಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಸಭೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್, ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರದಲ್ಲೂ ವಿಫಲವಾಗಿದೆ. ಸಿಎಂ, ಮಂತ್ರಿಮಂಡಲ ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಮಾಡುತ್ತೇವೆ ಎಂದರು.
ಇನ್ನು ಭೂಸುಧಾರಣಾ ಕಾಯ್ದೆ ತಿದ್ಧುಪಡಿ, ಎಪಿಎಂಸಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ, ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಡಿ.ಕೆ ಶಿವಕುಮಾರ್ ಕಿಡಿಕಾರಿದರು.
Key words: farmers- Injustice – government – corruption-kpcc president-DK Shivakumar