ವಿಧಾನಸೌಧದ ಮುತ್ತಿಗೆ ಹಾಕಲು ಮುಂದಾದ ರೈತರಿಗೆ ಪೊಲೀಸರಿಂದ ತಡೆ.

ಬೆಂಗಳೂರು,ಸೆಪ್ಟಂಬರ್,13,2021(www.justkannada.in):  ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಪ್ರತಿಭಟನಾನಿರತ ರೈತರನ್ನ ಪೊಲೀಸರು ತಡೆದರು.

ಬೆಂಗಳೂರು ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೂ ಪ್ರತಿಭಟನಾ ರ್ಯಾಲಿ ಮೂಲಕ ತೆರಳುತ್ತಿದ್ದ ರೈತರನ್ನ ಫ್ರೀಡಂಪಾರ್ಕ್ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು. ಈ ವೇಳೆ ರೈತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದು ರೈತರು ರಸ್ತೆಯಲ್ಲೇ ಕುಳಿತು ಪ್ರತಿಭಟನೆಗೆ ಮುಂದಾದರು.

ಇನ್ನು ಸರ್ಕಾರಕ್ಕೆ ಒಂದು ಗಂಟೆ ಗಡುವು ನೀಡಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್, ಸರ್ಕಾರದ ಪ್ರತಿನಿಧಿ ಇಲ್ಲಿಗೆ ಬರಬೇಕು. ಇಲ್ಲದಿದ್ದರೇ ನಮ್ಮನ್ನೇ ವಿಧಾನಸೌಧದ ಒಳಗೆ ಬಿಡಬೇಕು ಎಂದು ಆಗ್ರಹಿಸಿದರು.

Key words: Farmers – protest-bangalore-vidanasoudha-police.