ನವದೆಹಲಿ,ಜನವರಿ,26,2021(www.justkannada.in): ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರ ಮೇಲೆಯೇ ರೈತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಗಾಜಿಪುರದ ಗಡಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಬರುತ್ತಿದ್ದ ರೈತರ ಮೇಲೆ ಅಶ್ರುವಾಯು ಪ್ರಯೋಗ ಮಾಡಲಾಗಿತ್ತು. ಟ್ರ್ಯಾಕ್ಟರ್ಗಳಲ್ಲಿ ಬಂದ ರೈತರನ್ನು ಸಿಂಘು ಗಡಿ ಮತ್ತು ಗಾಜಿಪುರ ಗಡಿಯಲ್ಲೇ ಬ್ಯಾರಿಕೇಡ್ ಹಾಕಿ ತಡೆಯಲು ಯತ್ನಿಸುತ್ತಿದ್ದರೂ ಸಿಟ್ಟಿಗೆದ್ದ ರೈತರು ಬ್ಯಾರಿಕೇಡ್ ಮುರಿದು ಒಳನುಗ್ಗಲು ಯತ್ನಿಸಿದ್ದು, ಲಾಠಿಚಾರ್ಜ್ ಮಾಡಲಾಗಿದೆ.
ಹಾಗೆಯೇ ಇದೀಗ ದೆಹಲಿಯ ಐಟಿಒ ಸರ್ಕಲ್ ನಲ್ಲಿ ಪೊಲೀಸರು ಮತ್ತು ರೈತರ ನಡುವೆ ಘರ್ಷಣೆ ಉಂಟಾಗಿ ಪೊಲೀಸರ ಮೇಲೆಯೇ ರೈತರು ಹಲ್ಲೆ ನಡೆಸಿದ್ದಾರೆ. ಇದೇ ವೇಳೆ ರೈತರ ಮೇಲೆ ಲಾಠಿ ಚಾರ್ಜ್ ಆಗಿದ್ದು, ರೈತರು ಮತ್ತು ಪೊಲೀಸರಿಗೆ ಗಾಯಗಳಾಗಿವೆ ಎನ್ನಲಾಗಿದೆ. ರೈತರ ಪ್ರತಿಭಟನೆಯ ಸ್ವರೂಪ ಉಗ್ರವಾಗಿದ್ದು, ಕಾಯ್ದೆ ಹಿಂಪಡೆಯುವವರೆಗೂ ಹೋರಾಟ ನಿಲ್ಲೋದಿಲ್ಲ ಎಂದು ಎಚ್ಚರಿಸಿದ್ದಾರೆ.
ರೈತರ ಟ್ರ್ಯಾಕ್ಟರ್ ರ್ಯಾಲಿಗೆ ಅಡ್ಡಲಾಗಿ ನಿಲ್ಲಿಸಿದ್ಧ ಬಸ್ ಗಳ ಗಾಜುಗಳು ಪುಡಿಪುಡಿಯಾಗಿದ್ದು ರೈತರ ಪ್ರತಿಭಟನೆ ಹಿಂಸಾರೂಪ ಪಡೆದ ಹಿನ್ನೆಲೆ ಕೆಂಪು ಕೋಟೆ ಮೆಟ್ರೋ ನಿಲ್ದಾಣ ಮತ್ತು ಹಸಿರು ಮಾರ್ಗ ಮೆಟ್ರೋ ನಿಲ್ದಾಣವನ್ನ ಬಂದ್ ಮಾಡಲಾಗಿದೆ.
Key words: Farmer’s -tractor rally -turned -violent -Delhi.