ಮಡಿಕೇರಿ,ನವೆಂಬರ್,23,2022(www.justkannada.in): ಮಡಿಕೇರಿಯಲ್ಲಿ ಲಂಚಸ್ವೀಕರಿಸುತ್ತಿದ್ದ ವೇಳೆ ಪ್ರದಮ ದರ್ಜೆ ಸಹಾಯಕಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಕೊಡಗು ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಎಫ್ ಡಿಎ ಲತಾ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದವರು. ಸಬ್ಸಿಡಿ ಕಾರು ಮಂಜುರಾತಿಗೆ 10% ಲಂಚ ಕೇಳಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಲತೀಫ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಈ ಮಧ್ಯೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು ಲಂಚ ಪಡೆಯುವಾಗ ಎಫ್ ಡಿಎ ಲತಾ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
Key words: FDA- Lokayukta- trap – accepting- bribes.